ಗುರುವಾರ , ಜುಲೈ 7, 2022
23 °C

ಜೆಡಿಎಸ್‌: ಗಂಗಾಜಲದ ಕಳಶ ಪ್ರತಿಷ್ಠಾಪನೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಭಾಗವಾಗಿ ರಾಜ್ಯದ 15 ನದಿ, ಉಪನದಿಗಳಿಂದ ನೀರನ್ನು ಸಂಗ್ರಹಿಸಿರುವ ‘ಗಂಗಾಜಲ ಕಳಶ’ದ ಪ‍್ರತಿಷ್ಠಾಪನೆ ಸಮಾರಂಭ ಗುರುವಾರ ಜೆಡಿಎಸ್‌ ಕಚೇರಿಯಲ್ಲಿ ನಡೆಯಲಿದೆ.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು.

ಜೆಡಿಎಸ್‍ ಪ್ರಧಾನ ಕಚೇರಿ ಜೆಪಿ ಭವನದಲ್ಲಿ 500 ಲೀಟರ್ ಜಲ ತುಂಬಲಿರುವ 10 ಅಡಿಯ ಎತ್ತರದ ಕಳಶವನ್ನು ಸ್ಥಾಪನೆ ಮಾಡಲಾಗುವುದು. ದೇಶದ ಏಳು ಮಹಾ ನದಿಗಳ ಹೆಸರಿನಲ್ಲಿ ಪುಟ್ಟ ಕಳಸಗಳನ್ನು ಇಟ್ಟು ಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.

ಕಳಸ ಪ್ರತಿಷ್ಠಾಪನೆ ಮಾಡಲಿರುವ ಮಂಟಪವನ್ನು ಕರ್ನಾಟಕದ ಪರಂಪರೆ ಬಿಂಬಿಸುವ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದರು. ಬೆಳಿಗ್ಗೆ 9 ಗಂಟೆಯಿಂದ ನಡೆಯಲಿರುವ ಗಂಗಾ ಪೂಜೆ ಸಂದರ್ಭದಲ್ಲಿ ಪರ್ಜನ್ಯ ಹೋಮ, ಗಣ ಹೋಮ, ನವಗ್ರಹ ಹೋಮ ಸೇರಿದಂತೆ ಹಲವು ಹೋಮಗಳು ನಡೆಯಲಿವೆ. ಮುಂದಿನ ಚುನಾವಣೆವರೆಗೆ ಈ ಕಳಶಕ್ಕೆ ಪೂಜೆ ನಡೆಯುತ್ತದೆ. ಜೆಡಿಎಸ್‍ ವರಿಷ್ಠರಾದ ಎಚ್.ಡಿ.ದೇವೇಗೌಡರು, ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಹಲವಾರು ಪ್ರಮುಖರು ಪೂಜಾ ಕಾರ್ಯಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು