ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ ಜನತಾ ಜಲಧಾರೆ: ಗಂಗಾ ಮಾತೆ ಬ್ರಹ್ಮಕಲಶ ಪ್ರತಿಷ್ಠಾಪನೆ

ಬ್ರಹ್ಮಕಲಶಕ್ಕೆ ಪವಿತ್ರ ಜಲ ತುಂಬಿಸಿದ ಎಚ್.ಡಿ.ಕುಮಾರಸ್ವಾಮಿ
Last Updated 26 ಮೇ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಜನತಾ ಜಲಧಾರೆ ಗಂಗಾ ರಥಯಾತ್ರೆ ಅಂಗವಾಗಿ ರಾಜ್ಯದ ಎಲ್ಲ ನದಿಗಳಿಂದ ಸಂಗ್ರಹಿಸಿದ್ದ ಪವಿತ್ರ ಗಂಗಾ ಜಲದ ಕಲಶ ಪ್ರತಿಷ್ಠಾಪನೆಯ ಮಹಾಪೂಜೆ ಹಾಗೂ ಪ್ರತಿಷ್ಠಾಪನೆ ಗುರುವಾರ ನಡೆಯಿತು.

ಜೆಡಿಎಸ್‍ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮಕಲಶಕ್ಕೆ ಪಂಡಿತ ಭಾನುಪ್ರಕಾಶ್ ಶರ್ಮ ನೇತೃತ್ವದ ಪಂಡಿತರ ತಂಡ ಪೂಜಾ ಕೈಂಕರ್ಯಗಳು ನಡೆಸಿಕೊಟ್ಟಿತು.

10 ಅಡಿ ಎತ್ತರದ 500 ಲೀಟರ್ ಜಲ ತುಂಬಲಿರುವ ಕಲಶವನ್ನು ಪ್ರತಿಷ್ಠಾಪನೆ ಮಾಡಲಾಯಿತು.

ಬೆಳಿಗ್ಗೆ 9 ಗಂಟೆಯಿಂದಲೇ ಗಣ ಹೋಮ, ನವಗ್ರಹ ಹೋಮ, ಗಂಗಾ ಪೂಜೆ, ಪರ್ಜನ್ಯ ಹೋಮ, ಪೂರ್ಣಾಹುತಿ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಪೂಜೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು.

ದೇಶದ ಏಳು ಮಹಾನದಿಗಳ ಹೆಸರಿನಲ್ಲಿ ಇರಿಸಲಾಗಿದ್ದ ಹದಿನೈದು ಪುಟ್ಟ ಕಲಶಗಳಿಗೆ ಕುಮಾರಸ್ವಾಮಿ ಅವರು ಶಾಸ್ತ್ರಬದ್ಧವಾಗಿ ಪೂಜೆ, ವಿಧಿ ವಿಧಾನ ನೆರವೇರಿಸಿದರು. ಬಳಿಕ, ಬ್ರಹ್ಮಕಲಶ ಪ್ರತಿಷ್ಠಾಪನೆ ನಡೆಯಿತು. ರಾಜ್ಯದ ಉದ್ದಗಲಕ್ಕೂ ಸಂಗ್ರಹಿಸಿದ್ದ ಜಲವನ್ನು ಅದಕ್ಕೆ ತುಂಬಿಸಲಾಯಿತು. ಮೊದಲು, ಕುಮಾರಸ್ವಾಮಿ ಅವರು ಪುಟ್ಟ ಕಲಶದ ಮೂಲಕ ಬ್ರಹ್ಮಕಲಶಕ್ಕೆ ಪವಿತ್ರ ಜಲವನ್ನು ತುಂಬಿಸಿದರು.

ಗುರುವಾರದಿಂದ ಮುಂದಿನ ಒಂದು ವರ್ಷ ಅಂದರೆ ಚುನಾವಣೆ ನಡೆಯುವವರೆಗೆ ಕಲಶಕ್ಕೆ ನಿತ್ಯ ಗಂಗಾಪೂಜೆ ನಡೆಯುತ್ತದೆ. ನೀರು ಕೆಡದಂತೆ ನೋಡಿಕೊಳ್ಳಲು ವಿಶೇಷ ‘ಯುವಿ - ಓಜೋನೈಶನ್’ ವ್ಯವಸ್ಥೆ ಮಾಡಲಾಗಿದೆ. ಇದು ಆಮ್ಲಜನಕಯುಕ್ತಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ವಿಶೇಷ ಮಂಟಪ
ಕಲಶ ಪ್ರತಿಷ್ಠಾಪನೆ ಮಾಡಿರುವ ಮಂಟಪವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪವುಳ್ಳ ಮಂಟಪ ವಿಶೇಷ ಆಕರ್ಷಣೆಯಾಗಿದೆ. ಇಡೀ ಮಂಟಪವನ್ನು ಆವರಣ ಮಂಟಪ ಕಲಾ ಆರ್ಟ್‌ನ ಕಲಾವಿದರು ಸಿದ್ಧಪಡಿಸಿದ್ದಾರೆ.

*

ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಹಾಗೂ ಎಲ್ಲ ಜಿಲ್ಲೆಗಳಿಗೂ ಸಮಗ್ರ ನೀರಾವರಿ ಕಲಿಸುವ ಸಂಕಲ್ಪ ಮಾಡಲಾಯಿತು.
–ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT