ಬುಧವಾರ, ಫೆಬ್ರವರಿ 19, 2020
30 °C

ಇಂದಿನಿಂದ ಜೆಡಿಎಸ್‌ ರಾಷ್ಟ್ರೀಯ ಕಾರ್ಯಕಾರಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನಡೆಯಲಿದೆ.

ಸೋಮವಾರ ಸಂಜೆ 6 ಗಂಟೆಗೆ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದ್ದರೆ, ಮಂಗಳವಾರ ಬೆಳಿಗ್ಗೆ 11ರಿಂದ ನಗರದ ಅರಮನೆ ಮೈದಾನದ ಗೇಟ್‌ ನಂ.5ರಲ್ಲಿನ ನಳಪಾದ್‌ ಸಭಾಂಗಣದಲ್ಲಿ ಕಾರ್ಯಕಾರಿಣಿ ಮುಂದುವರಿಯಲಿದೆ. 

ಕೇರಳ, ಆಂಧ್ರಪ್ರದೇಶ, ಮಧ್ಯಪ್ರದೇಶ ಸಹಿತ ಹಲವು ರಾಜ್ಯ ಘಟಕಗಳ ಅಧ್ಯಕ್ಷರು, ರಾಷ್ಟ್ರೀಯ ಸಂಘಟನೆಯಲ್ಲಿ ತೊಡಗಿಸಿಕೊಂಡ ಪ್ರಮುಖರು ಸಹಿತ ಸುಮಾರು ಎರಡು ಸಾವಿರ ಮಂದಿ ಮಂಗಳವಾರದ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

‘ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಇದು, ಬಳಿಕ ರಾಜ್ಯ ಕಾರ್ಯಕಾರಣಿಯೂ ನಡೆಯಲಿದೆ’ ಎಂದು ಮೂಲಗಳು ತಿಳಿಸಿವೆ.

ಇಂದು ನಿಶ್ಚಿತಾರ್ಥ: ಈ ಮಧ್ಯೆ, ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಅವರ ವಿವಾಹ ನಿಶ್ಚಿತಾರ್ಥ ಸೋಮವಾರ ಬೆಳಿಗ್ಗೆ 10.30ರಿಂದ ನಗರದ ತಾಜ್‌ ವೆಸ್ಟ್‌ಎಂಡ್‌ನಲ್ಲಿ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)