ಬೆಂಗಳೂರು: ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಜೆಡಿಎಸ್ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ಗೌಡ ದೂರಿದರು.

ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಅವರು ಪಕ್ಷದ ಮುಖಂಡರ ಜತೆಗೆ ಮಂಗಳವಾರ ಸಭೆ ನಡೆಸಿದರು.

‘ಮುಂದಿನ ವರ್ಷ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು, ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬೆಂಗಳೂರು ನಗರ ಶಿಕ್ಷಕರ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಕ್ಷಕರ ನೋಂದಣಿ ಮಾಡಿಸಬೇಕು’ ಎಂದು ಹೇಳಿದರು.

‘ರಾಜ್ಯ ಸರ್ಕಾರವು ನಿರುದ್ಯೋಗ ಸಮಸ್ಯೆ ತೊಡೆದು ಹಾಕಿ, ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವನಿಧಿ ‘ಗ್ಯಾರಂಟಿ’ಯನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಈ ವಿಷಯಗಳನ್ನು ಇಟ್ಟುಕೊಂಡು ನಾವು ಶಿಕ್ಷಕರನ್ನು ಸಂಘಟಿಸಬೇಕು’ ಎಂದರು.

‘ಮೇಲ್ಮನೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕು’ ಎಂದು ಹೇಳಿದರು.

ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್. ಭೋಜೇಗೌಡ, ಶಾಸಕರಾದ ಜವರಾಯಿ ಗೌಡ, ಟಿ.ಎ. ಶರವಣ, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ಪಕ್ಷದ ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.