ಬೆಂಗಳೂರು: ‘ಜೆಡಿಎಸ್ ಪಕ್ಷದ ಸಂಘಟನೆಯ ಉದ್ದೇಶದಿಂದ ಸೆ.7ರಂದು ತಾವರೆಕೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎನ್.ಜವರಾಯಿಗೌಡ ತಿಳಿಸಿದರು

ತಾವರೆಕೆರೆಯಲ್ಲಿ ಆಯೋಜಿಸಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಜೆಡಿಎಸ್ ಭದ್ರಕೋಟೆ ಆಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಸ್ಥಳಗಳಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

‘ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಬಾರಿ ನಾನು ಪರಾಭವಗೊಂಡರೂ, ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಬೆಂಬಲದಿಂದ ಕ್ಷೇತ್ರದಲ್ಲಿ ಬಲವಾಗಿ ಬೇರೂರಿದ್ದೇನೆ. ಪಕ್ಷದ ಬಲವರ್ಧನೆಗೆ ಮುಖಂಡರು, ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು’ ಎಂದು ಕರೆ ನೀಡಿದರು.

ಜೆಡಿಎಸ್ ಯುವ ಮುಖಂಡ ಸಂತೋಷ್ ಜವರಾಯಿಗೌಡ, ತಾವರೆಕೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಶಂಕರೇಗೌಡ, ಕೆಂಗೇರಿ–ತಾವರೆಕೆರೆ ಹೋಬಳಿ ಘಟಕದ ಅಧ್ಯಕ್ಷ ಕೇಶವಮೂರ್ತಿ, ತಾವರೆಕೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮನೋಹರ್, ಮುಖಂಡರಾದ ಮಂಜುನಾಥ್, ಚೇತನ್ ಗೌಡ, ಮಾರೇಗೌಡ, ತಾರಾ ಲೋಕೇಶ್, ಕೋಟಿ ರಾಜಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.