ರಾಜರಾಜೇಶ್ವರಿ ನಗರ: ಜೆಡಿಎಸ್ ಮಹಿಳಾ ಘಟಕದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾರ್ಚ್ 8ರಂದು ಬೆಳಿಗ್ಗೆ 11ಕ್ಕೆ ಮಾಗಡಿ ರಸ್ತೆಯ ಸುಮನಹಳ್ಳಿ ಬಳಿಯ ಬಾಬು ಜಗಜೀವನ್ ರಾಮ್ ಭವನದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಅಧ್ಯಕ್ಷ ಲಗ್ಗೆರೆ ಚಂದ್ರಶೇಖರ್ ತಿಳಿಸಿದರು.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್.ಡಿ. ರೇವಣ್ಣ ಲೀಲಾದೇವಿ ಆರ್.ಪ್ರಸಾದ್, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಶಾಸಕರಾದ ಶಾರದಾ ಪೂರ್ಯಾ ನಾಯಕ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿರಾಮೇಗೌಡ, ಜೆಡಿಎಸ್ ಪಶ್ಚಿಮ ಜಿಲ್ಲಾ ಅಧ್ಯಕ್ಷ ಟಿ. ತಿಮ್ಮೆಗೌಡ, ಆರ್.ಆರ್.ನಗರಕ್ಷೇತ್ರದ ಅಧ್ಯಕ್ಷೆ ಲತಾ, ಅಧ್ಯಕ್ಷ ಸಿ.ಆರ್.ಮೂರ್ತಿ ಭಾಗವಹಿಸುವರು. ಮಹಿಳೆಯರಿಂದ ಜನಪದ ನೃತ್ಯ, ಹಾಡುಗಾರಿಕೆ, ಕೋಲಾಟ ನಡೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.