ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ವಿಧಾನಸಭಾ ಹೊರತುಪಡಿಸಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಯು

Published 8 ಮೇ 2023, 14:25 IST
Last Updated 8 ಮೇ 2023, 14:25 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸಭೆ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ (ಜೆಡಿಯು) ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ’ ಎಂದು ಪಕ್ಷದ ನ್ಯಾಷನಲ್‌ ಕೌನ್ಸಿಲ್‌ ಸದಸ್ಯ ಜಿ.ವಿ. ರಾಮಚಂದ್ರಯ್ಯ ಮಾಹಿತಿ ನೀಡಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‌ಈ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯುದಿಂದ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‌ ಕುಮಾರ್‌ ಮತ್ತು ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್‌ ನಿರ್ದೇಶನ ನೀಡಿದ್ದಾರೆ’ ಎಂದು ಹೇಳಿದರು.

‘ಜೆಡಿಯು ಮತ್ತು ವಿರೋಧ ಪಕ್ಷದ ನಾಯಕ ಅವರ ಸಿದ್ದರಾಮಯ್ಯ ಅವರ ಸಿದ್ಧಾಂತಗಳಲ್ಲಿ ಸ್ವಲ್ಪ ಹೊಂದಾಣಿಕೆ ಆಗುತ್ತದೆ. ಆದ್ದರಿಂದ, ಜೆಡಿಯು ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸದಸ್ಯರು ಜೆಡಿಯು ಅಭ್ಯರ್ಥಿಗಳು ಇಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.

ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಬೇಹಳ್ಳಿ ನಾಗರಾಜ್ ಡಿ., ಕಾರ್ಯದರ್ಶಿ ಸೂರ್ಯಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT