ಸೋಮವಾರ, ಮೇ 23, 2022
21 °C

ಜೆಇಇ: ಬೆಂಗಳೂರಿನ ಸುಭಾಷ್‌ಗೆ 65ನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಇಇ ಮುಖ್ಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲಿಗರಾಗಿರುವ ಬೆಂಗಳೂರಿನ ವಿದ್ಯಾರಣ್ಯಪುರ ಚೈತನ್ಯ ಪಿಯು ಕಾಲೇಜಿನ ವಿದ್ಯಾರ್ಥಿ ಸುಭಾಷ್ ಆರ್ ಅವರು ‘ಬಾಂಬೆ ಐಐಟಿ’ಯಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ) ವಿಷಯದಲ್ಲಿ ಓದು ಮುಂದುವರಿಸಲು ತೀರ್ಮಾನಿಸಿದ್ದಾರೆ.

ಜನವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಶೇ 99.99 ಫಲಿತಾಂಶ ಪಡೆದಿದ್ದ ಸುಭಾಷ್, ಜೆಇಇ ಮುಖ್ಯ ಪರೀಕ್ಷೆಯಲ್ಲಿಯೂ ಅಷ್ಟೇ ಅಂಕ ಗಳಿಸಿದ್ದು, ಅಖಿಲ ಭಾರತ ಮಟ್ಟದಲ್ಲಿ 65ನೇ ಸ್ಥಾನ ಪಡೆದಿದ್ದಾರೆ. ರವಿಪ್ರಸಾದ್ ಜೆ. ಮತ್ತು ಸುಧಾ ಗೋಪಾಲಕೃಷ್ಣನ್ ದಂಪತಿಯ ಮಗನಾಗಿರುವ ಸುಭಾಷ್, ಜೆಇಇ ಅಡ್ವಾನ್ಸ್‌ ತಮ್ಮ ಮುಖ್ಯ ಗುರಿ ಎಂದೂ ಹೇಳಿದ್ದಾರೆ.

'ಲಾಕ್ ಡೌನ್ ಸಂದರ್ಭದಲ್ಲಿ ಪರೀಕ್ಷೆಗೆ ತರಬೇತಿ ಪಡೆದಿದ್ದೆ. ಶಿಕ್ಷಕರ ಜೊತೆ ಆನ್‌ಲೈನ್  ಸಂಪರ್ಕದಲ್ಲಿರುವ ಮೂಲಕ ವಿವಿಧ ಪ್ರವೇಶ ಪರೀಕ್ಷೆಗಳನ್ನು ಎದುರಿಸಿ, ಜನವರಿ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಹಂತಗಳಲ್ಲಿ ನಡೆದ ಪರೀಕ್ಷೆಗೆ ತಯಾರಿಸಿ ನಡೆಸಿದ್ದೆ’ ಎಂದೂ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು