ಶುಕ್ರವಾರ, ಜನವರಿ 22, 2021
27 °C

ಆಭರಣ ಮಳಿಗೆಯೊಂದರಲ್ಲಿ ₹ 35 ಲಕ್ಷ ಮೌಲ್ಯದ ಬೆಳ್ಳಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿರುವ ಆಭರಣ ಮಳಿಗೆಯೊಂದರಲ್ಲಿದ್ದ ₹ 35 ಲಕ್ಷ ಮೌಲ್ಯದ ಬೆಳ್ಳಿ ಸಾಮಗ್ರಿ ಹಾಗೂ ₹10 ಸಾವಿರ ಹಣವನ್ನು ಕಳ್ಳರು ಕದ್ದೊಯ್ದಿದ್ದಾರೆ.

‘ಇಮ್ಮಡಿಹಳ್ಳಿಯಲ್ಲಿರುವ ಮಾತಾಜಿ ಆಭರಣ ಮಳಿಗೆಯಲ್ಲಿ ಆಗಸ್ಟ್ 4ರ ತಡರಾತ್ರಿ ಈ ಕೃತ್ಯ ನಡೆದಿದೆ. ಮಾಲೀಕ ಧರ್ಮರಾಮ್ ಎಂಬುವರು ದೂರು ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಆಭರಣ ಮಳಿಗೆ ಪಕ್ಕವೇ ಗ್ರಂಥಿಗೆ ಮಾರಾಟ ಅಂಗಡಿ ಇದೆ. ಅದೇ ಅಂಗಡಿಯ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು, ಅಲ್ಲಿರುವ ಕಿಟಕಿ ಸರಳು ಮುರಿದು ಆಭರಣ ಮಳಿಗೆ ಪ್ರವೇಶಿಸಿದ್ದಾರೆ. ಚಿನ್ನದ ಆಭರಣಗಳಿದ್ದ ಲಾಕರ್ ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ, ಲಾಕರ್ ತೆರೆಯಲು ಸಾಧ್ಯವಾಗಿಲ್ಲ. ಬಳಿಕ, ಮಳಿಗೆಯಲ್ಲಿದ್ದ ಬೆಳ್ಳಿ ಸಾಮಗ್ರಿ ಹಾಗೂ ನಗದು ಕದ್ದುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ’ ಎಂದೂ ತಿಳಿಸಿದರು.

‘ಕಳವು ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು