ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣ ಕಳವು: ಆರೋಪಿ ಬಂಧನ

Published 11 ಸೆಪ್ಟೆಂಬರ್ 2023, 16:21 IST
Last Updated 11 ಸೆಪ್ಟೆಂಬರ್ 2023, 16:21 IST
ಅಕ್ಷರ ಗಾತ್ರ

ಬೆಂಗಳೂರು: ಮನೆ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರದ ಕುರುಪೇಟೆಯ ಗೋಪಿನಾಥ್‌ ಅಲಿಯಾಸ್‌ ಗೋಪಿ ಬಂಧಿತ ಆರೋಪಿ. ಈತ ನಗರದ ಕೋಣನಕುಂಟೆಯ ಬೀರೇಶ್ವರನಗರದಲ್ಲಿ ನೆಲೆಸಿದ್ದ.

‘ಬಂಧಿತನಿಂದ ₹ 6.50 ಲಕ್ಷದ 107 ಚಿನ್ನಾಭರಣ, ₹ 1.14 ಲಕ್ಷ ನಗದು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯು ಚುಂಚನಕಟ್ಟೆ ಮುಖ್ಯರಸ್ತೆ, ಆಂಜನೇಯ ದೇವಸ್ಥಾನ ಸುತ್ತಮುತ್ತ, ಯಲಚೇನಹಳ್ಳಿ, ಕೋಣನಕುಂಟೆ ಕ್ರಾಸ್‌ನಲ್ಲಿ ಮನೆಗಳನ್ನು ಗುರುತಿಸುತ್ತಿದ್ದ. ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿ ಬೀಗ ಒಡೆದು ಚಿನ್ನಾಭರಣ ಕಳವು ಮಾಡುತ್ತಿದ್ದ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT