ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲಿ ಚಿನ್ನಾಭರಣ ಕಳ್ಳತನ: ಇಬ್ಬರ ಬಂಧನ

Published 12 ಜನವರಿ 2024, 21:00 IST
Last Updated 12 ಜನವರಿ 2024, 21:00 IST
ಅಕ್ಷರ ಗಾತ್ರ

ಬೆಂಗಳೂರು: ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ
ಇಬ್ಬರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಣಿಕಂಠ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬಂಧಿತರಿಂದ ₹7.5 ಲಕ್ಷ ಮೌಲ್ಯದ 121 ಗ್ರಾಂ ಚಿನ್ನ, ₹1 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಲಗ್ಗರೆಯ ಮನೆಯೊಂದರಲ್ಲಿ ಡಿ.12ರಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದರು. ಇದೇ ಪ್ರಕರಣದಲ್ಲಿ ಡಿ.18ರಂದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಅವರಿಂದ ₹12 ಲಕ್ಷ ಮೌಲ್ಯದ 254 ಚಿನ್ನಾಭರಣ ಜಪ್ತಿ ಮಾಡಲಾಗಿತ್ತು. ಈಗ ಬಂಧನವಾದ ಇಬ್ಬರ ಪೈಕಿ ಒಬ್ಬನ ಹೆಸರು ರೌಡಿ ಪಟ್ಟಿಯಲ್ಲಿದೆ. ಆತನ ವಿರುದ್ಧ ಪೀಣ್ಯ, ಮಹಾಲಕ್ಷ್ಮಿಲೇಔಟ್‌, ಬ್ಯಾಡರಹಳ್ಳಿ, ಗಂಗಮ್ಮನಗುಡಿ, ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT