ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕಬ್ಬಿಣದ ಗ್ರಿಲ್ ಕತ್ತರಿಸಿ ಕಳ್ಳತನ; ₹15 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಕಿಟಕಿಗೆ ಅಳವಡಿಸಿದ್ದ , ಇಬ್ಬರು ಆರೋಪಿಗಳ ಬಂಧನ
Published 9 ಜೂನ್ 2024, 15:44 IST
Last Updated 9 ಜೂನ್ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ಕಿಟಕಿಗೆ ಅಳವಡಿಸಿದ್ದ ಕಬ್ಬಿಣದ ಗ್ರಿಲ್‌ ಕತ್ತರಿಸಿ ಮನೆಗೆ ನುಗ್ಗಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳತನ ಮಾಡುತ್ತಿದ್ದ, ಇಬ್ಬರು ಅಂತರ್‌ ರಾಜ್ಯ ಕಳ್ಳರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ₹15 ಲಕ್ಷ ಮೌಲ್ಯದ 208 ಗ್ರಾಂ ಚಿನ್ನಾಭರಣ, ಒಂದು ಕೆ.ಜಿ. ಬೆಳ್ಳಿಯ ವಸ್ತುಗಳು ಸೇರಿದಂತೆ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಜ್ಞಾನಭಾರತಿಯ ಮಾರುತಿನಗರದ ನಿವಾಸಿ ಹಮೀದ್ ಖಾನ್ ಅಲಿಯಾಸ್ ಚೋರ್ ಹಮೀದ್ (57) ಮತ್ತು ಕಗ್ಗಲಿಪುರ ಮುಖ್ಯರಸ್ತೆಯ ಗುಡಿಮಾವು ನಿವಾಸಿ ಖಲೀಲ್‌–ಉಲ್ಲಾ–ಶರೀಫ್ ಅಲಿಯಾಸ್ ಚೋಟು (34) ಬಂಧಿತ ಆರೋಪಿಗಳು.

‘ಕಳೆದ ತಿಂಗಳು ತಲಘಟ್ಟಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಬನಶಂಕರಿ 6ನೇ ಹಂತದ 2ನೇ ಬ್ಲಾಕ್‌ನಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳ್ಳತನ ಮಾಡಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು. ಮನೆಯ ಸುತ್ತಮುತ್ತಲಿನ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನಗರದಲ್ಲಿನ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ವೇಳೆಯಲ್ಲಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ವೃತ್ತಿಪರ ಕಳ್ಳರಾಗಿರುವ ಇವರ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಜೈಲಿಗೂ ಹೋಗಿ ಬಂದಿದ್ದಾರೆ. ಕದ್ದ ಮಾಲನ್ನು ಪರಿಚಿತರ ಮೂಲಕ ಮಾರಿಕೊಂಡು, ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದರು.

‘ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಲ್ಲಿಯೂ ಮನೆಗಳ್ಳತನ ಮಾಡಿದ್ದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿತ್ತು. ಜಾಮೀನು ಪಡೆದು ಹೊರಗೆ ಬಂದ ಬಳಿಕವೂ ಕಳ್ಳತನವನ್ನು ಮುಂದುವರೆಸಿದ್ದರು. ಆರೋಪಿಗಳ ಬಂಧನದ ನಂತರ ತಲಘಟ್ಟಪುರ ಮತ್ತು ಕುಂಬಳಗೋಡು ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ ತಲಾ ಒಂದು ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸರು ಹೇಳಿದರು.

ಖಲೀಲ್‌–ಉಲ್ಲಾ–ಶರೀಫ್
ಖಲೀಲ್‌–ಉಲ್ಲಾ–ಶರೀಫ್
ಹಮೀದ್ ಖಾನ್
ಹಮೀದ್ ಖಾನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT