ಶನಿವಾರ, ಜನವರಿ 23, 2021
28 °C

7 ಕಡೆ ಕಳವು: ₹ 55 ಲಕ್ಷ ಮೌಲ್ಯದ ಆಭರಣ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ 7 ಕಡೆಗಳಲ್ಲಿ ಕಳವು ಮಾಡಿದ್ದ ಆರೋಪಿ ರವಿಶಂಕರ್ (25) ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ₹55 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.

‘ಕುಮಾರಸ್ವಾಮಿ ಲೇಔಟ್ ಬಳಿಯ ಚಂದ್ರಾ ನಗರ ನಿವಾಸಿಯಾದ ರವಿಶಂಕರ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಕೃತ್ಯ ಎಸಗಿದ್ದ ನಂತರ, ಆಭರಣ ಮಾರಾಟ ಮಾಡಿದ್ದ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸಿಸಿಬಿ ವಿಶೇಷ ತಂಡ ಆರೋಪಿಯನ್ನು ಬಂಧಿಸಿದೆ’

‘ಹಲಸೂರು ಗೇಟ್, ಕೆ.ಆರ್.ಪುರ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಹನುಮಂತನಗರ, ಶಿಡ್ಲಘಟ್ಟ ಹಾಗೂ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಕೃತ್ಯ ಎಸಗಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು