ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಚಿನ್ನಾಭರಣ ದರೋಡೆ: ಆರೋಪಿ ಬಂಧನ

Published : 3 ಆಗಸ್ಟ್ 2024, 14:28 IST
Last Updated : 3 ಆಗಸ್ಟ್ 2024, 14:28 IST
ಫಾಲೋ ಮಾಡಿ
Comments

ಬೆಂಗಳೂರು: ಮನೆಗಳ ಬೀಗವನ್ನು ನಕಲಿ ಕೀ ಬಳಸಿ ತೆಗೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡುತ್ತಿದ್ದ ಆರೋಪಿಯನ್ನು ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಶವಂತಪುರದ ನಿವಾಸಿ ಅರ್ಜುನ್‌ ಬಂಧಿತ. ಆರೋಪಿಯಿಂದ ₹4.5 ಲಕ್ಷ ಮೌಲ್ಯದ 68 ಗ್ರಾಂ ಚಿನ್ನಾಭರಣ, 180 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಗಾಯತ್ರಿ ನಗರದ ನಿವಾಸಿಯೊಬ್ಬರು ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ತಮಿಳುನಾಡು ಮೂಲದ ಅರ್ಜುನ್‌, 20 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ. ಯಶವಂತಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಜುಲೈ 26ರಂದು ಗಾಯತ್ರಿ ನಗರದ ಮನೆಯೊಂದರಲ್ಲಿ ಚಿನ್ನ ಹಾಗೂ ಬೆಳ್ಳಿ ಸಾಮಗ್ರಿ ಕಳವು ಮಾಡಿ ಪರಾರಿಯಾಗಿದ್ದ. ಆರ್‌.ಪಿ.ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಆಗ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವ ವಿಚಾರವನ್ನು ಬಾಯ್ಬಿಟ್ಟಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಕಳ್ಳತನವನ್ನೇ ಉದ್ಯೋಗ ಮಾಡಿಕೊಂಡಿದ್ದ. ಈತನ ವಿರುದ್ಧ ತಲಘಟ್ಟಪುರ, ತಿಲಕ್‌ನಗರ, ಮಹಾಲಕ್ಷ್ಮೀಪುರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT