ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೃತಕ ಬುದ್ಧಿಮತ್ತೆಯೊಂದಿಗೆ ಉದ್ಯೋಗ ಸ್ಪರ್ಧೆ’

ಕೌಶಲ ವೃದ್ಧಿಸಿಕೊಳ್ಳಲು ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಿವಿಮಾತು
Last Updated 15 ಡಿಸೆಂಬರ್ 2019, 20:04 IST
ಅಕ್ಷರ ಗಾತ್ರ

ಬೆಂಗಳೂರು: ‘ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನ ಎಲ್ಲ ಕ್ಷೇತ್ರಗಳನ್ನೂಆವರಿಸಿಕೊಳ್ಳುತ್ತಿದೆ. ಆದ್ದರಿಂದ ಯುವಜನತೆ ಕೌಶಲ ವೃದ್ಧಿಸಿಕೊಳ್ಳುವ ಮೂಲಕ ಉದ್ಯೋಗ ಮಾರುಕಟ್ಟೆಯಲ್ಲಿ ಏರ್ಪಡುವ ಸ್ಪರ್ಧೆಗೆ ಅಣಿಯಾಗಬೇಕು’ ಎಂದು ಹೃಷಿಕೇಶದ ದಯಾನಂದ ಆಶ್ರಮದಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಿವಿಮಾತು ಹೇಳಿದರು.

ಕರ್ನಾಟಕ ಆರ್ಯ ವೈಶ್ಯ ಚಾರಿಟಬಲ್ ಟ್ರಸ್ಟ್ ನಗರದಲ್ಲಿ ಭಾನುವಾರ ಆಯೋಜಿಸಿದ್ದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.‘ತಂತ್ರಜ್ಞಾನ ಯುಗದಲ್ಲಿ ಕೌಶಲಗಳನ್ನು ಹೊಂದಿದ್ದರೆ ಮಾತ್ರ ಮುಂದಿನ ಹಾದಿಗಳು ಸುಗಮವಾಗಲಿದೆ. ಆದರೆ, ಇಂದಿನ ಮಕ್ಕಳು ಪಠ್ಯ ಶಿಕ್ಷಣಕ್ಕೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ. ಇದರಿಂದಾಗಿ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಲು ಕೆಲವರಿಗೆ ಸಾಧ್ಯವಾಗುತ್ತಿಲ್ಲ’ ಎಂದರು. ‌

ಸಂಸದ ತೇಜಸ್ವಿ ಸೂರ್ಯ, ‘ದೇಶದ ಅಭಿವೃದ್ಧಿಗೆ ಸರ್ಕಾರಗಳ ಜತೆಗೆ ವಿವಿಧ ಸಮುದಾಯಗಳು ತಮ್ಮದೇ
ಆದ ಕೊಡುಗೆಗಳನ್ನು ನೀಡುತ್ತಿವೆ. ಸರ್ಕಾರಗಳು ಬದಲಾಗುತ್ತಿದ್ದರೂಸಮುದಾಯಗಳು ಮಾತ್ರ ತಮ್ಮ ಮೂಲಆಶಯಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿಲ್ಲ. ಜೀವನಪೂರ್ತಿ ಪ್ರೇರಣಾ ಹಾಗೂ ಕಲಿಕಾ ಮನೋಭಾವವನ್ನು ರೂಢಿಸಿಕೊಳ್ಳುವ ಮೂಲಕ ಹೊಸ ಸಂಗತಿಗಳ ಬಗೆಗೆ ತಿಳಿದುಕೊಳ್ಳಲು ಉತ್ಸುಕರಾಗಬೇಕು’ ಎಂದರು.

ವಿದ್ಯಾರ್ಥಿ ವೇತನ ವಿತರಣೆ: ಉನ್ನತ ಶಿಕ್ಷಣದ ವಿವಿಧ ವಿಷಯಗಳಲ್ಲಿ ಸಾಧನೆ ಮಾಡಿದ ರಾಜ್ಯದ 106 ವಿದ್ಯಾರ್ಥಿಗಳು ಹಾಗೂ ಆಂಧ್ರಪ್ರದೇಶ ಮತ್ತು ತಮಿಳುನಾಡಿನ 46 ವಿದ್ಯಾರ್ಥಿಗಳಿಗೆ ಟ್ರಸ್ಟ್‌ನಿಂದ ಒಟ್ಟು ₹ 8 ಕೋಟಿ ವಿದ್ಯಾರ್ಥಿವೇತನ ನೀಡಲಾಯಿತು.

ಕರ್ನಾಟಕ ಆರ್ಯ ವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ್, ‘ನಮ್ಮ ಸಮುದಾಯದವರು ಉನ್ನತ ಸ್ಥಾನಗಳಿಗೆ ಏರಬೇಕು. ಸಾಧನೆಯ ಛಲ ಹೊಂದಿರುವವರಿಗೆ ಸದಾ ಬೆನ್ನೆಲುಬಾಗಿ ಇರುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT