ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಡೇರುತ್ತಿದೆ ಉದ್ಯೋಗದ ಆಶಯ: ಪ್ರಲ್ಹಾದ ಜೋಶಿ

Last Updated 22 ಅಕ್ಟೋಬರ್ 2022, 19:25 IST
ಅಕ್ಷರ ಗಾತ್ರ

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ತಿಂಗಳು75 ಸಾವಿರ ಯುವಕರಿಗೆ ಉದ್ಯೋಗ ನೀಡುವ ಯೋಜನೆ ಆರಂಭಿಸಿದ್ದಾರೆ. ದೇಶದ ಯುವ ಸಮೂಹದ ಉದ್ಯೋಗದ ಆಶಯ ಈಡೇರಿಸುತ್ತಿದ್ದಾರೆ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನ ‘ರೋಜ್‍ಗಾರ್ ಮೇಳ’ಕ್ಕೆ ಶನಿವಾರ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

10 ಲಕ್ಷ ಉದ್ಯೋಗ ನೀಡುವ ಭರವಸೆ ನೀಡಲಾಗಿದೆ. ವಿದ್ಯಾವಂತರಿಗೆ ಸರ್ಕಾರಿ ಉದ್ಯೋಗ ನೀಡುವುದಷ್ಟೇ ಅಲ್ಲ, ಶಿಕ್ಷಣ ವಂಚಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಶ್ರಮಿಕ ವರ್ಗದ ಜನರು ಸಮರ್ಪಕವಾಗಿ ಕೆಲಸ ಮಾಡುವ ವಾತಾವರಣ ಕಲ್ಪಿಸುವುದು, ಬಡ್ಡಿ ರಹಿತ, ಸುಲಭ ಸಾಲದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.

ಬೆಲೆ ಏರಿಕೆಗೆ ವಿದೇಶಗಳಲ್ಲಿನ ಹಣದುಬ್ಬರ ಕಾರಣ, ರಾಹುಲ್‌ ಗಾಂಧಿ ಮತ್ತು ಅವರ ತಂಡಕ್ಕೆ ವಿದೇಶಗಳ ಆರ್ಥಿಕ ವ್ಯವಸ್ಥೆಯ ಜ್ಞಾನವಿಲ್ಲ, ಅವರಿಗೆ ನಿರುದ್ಯೋಗದ ಸಮಸ್ಯೆ ಇದೆ. ಅದನ್ನು ದೇಶಕ್ಕೆ ಅನ್ವಯಿಸುತ್ತಿದ್ದಾರೆ. ಭಾರತ್ ಜೋಡೊ ಯಾತ್ರೆ ಆರಂಭವಾದ ನಂತರ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ ಶಾಸಕರೇ ಚೋಡೊ ಆಗುತ್ತಿದ್ದಾರೆ ಎಂದು ಕುಟುಕಿದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT