ಕೆ.ಆರ್. ಪುರ: ಶಾಂತಾ ಕೃಷ್ಣಮೂರ್ತಿ ಫೌಂಡೇಷನ್ ವತಿಯಿಂದ ಇದೇ 12ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

‘ಲಾಕ್‌ಡೌನ್ ಸಂದರ್ಭದಲ್ಲಿ ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿರುವುದರಿಂದ ಆ ಕುಟುಂಬಗಳು ಆರ್ಥಿಕವಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಅವರಿಗೆ ನೆರವಾಗಲಿ ಎಂಬ ಉದ್ದೇಶದಿಂದ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಫೌಂಡೇಷನ್ ಅಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ ತಿಳಿಸಿದರು.

‘ಮೇಳದಲ್ಲಿ ಇನ್ಫೊಸಿಸ್, ಐಬಿಎಂ, ಬಾಷ್, ಟೊಯೊಟಾ ಸೇರಿದಂತೆ 120ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಸುಮಾರು ಐದು ಸಾವಿರ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಗುರಿಯನ್ನು ಹೊಂದಿದ್ದೇವೆ’ ಎಂದರು.

ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ‘ಸಾಫ್ಟ್‌ವೇರ್, ಹಾರ್ಡ್‌ವೇರ್, ಸೇಲ್ಸ್, ಮಾರ್ಕೆಟಿಂಗ್, ಬಿಪಿಒ, ಬ್ಯಾಂಕಿಂಗ್, ಅಕೌಂಟಿಂಗ್, ಗ್ರಾಫಿಕ್ಸ್ ಡಿಸೈನಿಂಗ್, ರೀಟೈಲ್, ಮ್ಯಾನುಫ್ಯಾಕ್ಚರಿಂಗ್, ಮ್ಯಾನೇಜ್‌ಮೆಂಟ್ ಹಾಗೂ ಇನ್ನಿತರ ವಲಯಗಳ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಸುಮಾರು 1,200ಕ್ಕೂ ಹೆಚ್ಚು ಮಂದಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ’ ಎಂದರು.

ಎನ್‌ಆರ್‌ಐ ಲೇಔಟ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಮುಂಭಾಗದಲ್ಲಿ 12ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮೇಳ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು 90668 50012 ಸಂಖ್ಯೆಯನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.