ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಮೇಳ: 9,651 ಮಂದಿಗೆ ನೇರ ಉದ್ಯೋಗ- ಶರಣಪ್ರಕಾಶ ಪಾಟೀಲ

ಉದ್ಯೋಗ ಮೇಳದಲ್ಲಿ 44,527 ಅಭ್ಯರ್ಥಿಗಳು ಭಾಗಿ: ಶರಣಪ್ರಕಾಶ ಪಾಟೀಲ
Published 28 ಫೆಬ್ರುವರಿ 2024, 16:06 IST
Last Updated 28 ಫೆಬ್ರುವರಿ 2024, 16:06 IST
ಅಕ್ಷರ ಗಾತ್ರ

ಬೆಂಗಳೂರು: ‘ಕೌಶಲ್ಯಾಭಿವೃದ್ಧಿ ಇಲಾಖೆಯು ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಯುವ ಸಮೃದ್ಧಿ ಸಮ್ಮೇಳನದಲ್ಲಿ (ಉದ್ಯೋಗ ಮೇಳ) 9,651 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡಲಾಗಿದೆ’ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿದ್ದರು. ಸಮ್ಮೇಳನದಲ್ಲಿ 44,527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651 ಆಕಾಂಕ್ಷಿಗಳಿಗೆ ಉದ್ಯೋಗ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ಇವರಿಗೆ ಕೂಡ ಉದ್ಯೋಗ ನೀಡಲಾಗುವುದು ಎಂದು ತಿಳಿಸಿದರು.

ವೈಮಾನಿಕ ಮತ್ತು ನಾಗರಿಕ ವಲಯದಿಂದ 26, ಕೃಷಿ 6, ಸಿದ್ಧ ಉಡುಪು ವಲಯ 6, ಆಟೊಮೊಟಿವ್ 74, ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27, ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19, ಸೇವಾ ವಲಯ 36, ಮೂಲ ಸೌಕರ್ಯ ಉಪಕರಣಗಳ ವಲಯ 1 ಸೇರಿದಂತೆ ವಿವಿಧ ವಲಯಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ರಾಜ್ಯದ ಮೂರು ಪ್ರಮುಖ ವಿಭಾಗಗಳಲ್ಲಿ ಯುವ ಸಮೃದ್ಧಿ ಸಮ್ಮೇಳನ ನಡೆಸಲಾಗುವುದು. ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುವುದು. ಕೊಪ್ಪಳ ಹಾಗೂ ಮೈಸೂರಿನಲ್ಲಿ ತರಬೇತಿ ಕೇಂದ್ರ ಪ್ರಾರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ  ಎಂದು ಶರಣಪ್ರಕಾಶ ಪಾಟೀಲ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಸಿ.ಆರ್. ಕೃಷ್ಣಕುಮಾರ್ ಉಪಸ್ಥಿತರಿದ್ದರು.

ಸಾಗರೋತ್ತರ ಕಂಪನಿ ಪ್ರಾರಂಭ

ವಿದೇಶಿ ಕಂಪನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭಿಸಲಿದೆ ಎಂದು ಶರಣಪ್ರಕಾಶ ಪಾಟೀಲ ಪ್ರಕಟಿಸಿದರು. ಎಂಜಿನಿಯರಿಂಗ್ ಡಿಪ್ಲೊಮಾ ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಸಾಗರೋತ್ತರ ಕಂಪನಿಗಳ ಮೂಲಕ ಮಾಹಿತಿ ನೀಡಲಾಗುವುದು. ಈಗಾಗಲೇ 49 ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT