ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಉದ್ಯೋಗ ಮೇಳ’ದಿಂದ 250 ಮಂದಿಗೆ ಉದ್ಯೋಗ

Last Updated 1 ಮಾರ್ಚ್ 2021, 5:17 IST
ಅಕ್ಷರ ಗಾತ್ರ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರ ಸಂಸದ್ ಉದ್ಯೋಗ ಮಿತ್ರ ಹಾಗೂ ನವ ಬೆಂಗಳೂರು ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಬಿಟಿಎಂ ಬಡಾವಣೆಯ ಶಾಂತಿನಿಕೇತನ ಶಾಲೆಯ ಆವರಣದಲ್ಲಿ ‘ಬೃಹತ್ ಉದ್ಯೋಗ ಮೇಳ’ವನ್ನು ಭಾನುವಾರ ಆಯೋಜಿಸಲಾಗಿತ್ತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ನವ ಬೆಂಗಳೂರು ಪ್ರತಿಷ್ಠಾನದ ಮುಖ್ಯಸ್ಥ ಅನಿಲ್ ಶೆಟ್ಟಿ, ಮುಖಂಡರಾದ ಗೋಪಿನಾಥ್ ರೆಡ್ಡಿ, ಪ್ರಕ್ಟೋ ಸಂಸ್ಥೆಯ ಮುಖ್ಯಸ್ಥ ಶಶಾಂಕ್, ರಿಚರ್ಡ್ ಪಟ್ಟಲೆ ಹಾಗೂ ‘ಕು ಆ್ಯಪ್‌’ನ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಭಾಗವಹಿಸಿದ್ದರು.

‘ಮೇಳದಲ್ಲಿ 70ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗವಹಿಸಿದ್ದವು. ಉದ್ಯೋಗ ಮೇಳಕ್ಕೆ 1,500ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 250 ಮಂದಿ ಸ್ಥಳದಲ್ಲೇ ವಿವಿಧ ಉದ್ಯೋಗಗಳಿಗೆ ಆಯ್ಕೆಯಾದರು. 750 ಮಂದಿ ಅಭ್ಯರ್ಥಿಗಳನ್ನು ಎರಡನೇ ಹಂತದ ಸಂದರ್ಶನಕ್ಕೆ ಕರೆಯಲಾಗಿದೆ’ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT