ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಉದ್ಯೋಗದ ಆಮಿಷವೊಡ್ಡಿ ವಂಚನೆ: ದಂಪತಿ ಬಂಧನ

ವಿದ್ಯಾರಣ್ಯಪುರ ಠಾಣೆ ಪೊಲೀಸರ ಕಾರ್ಯಾಚರಣೆ
Published 20 ಫೆಬ್ರುವರಿ 2024, 16:19 IST
Last Updated 20 ಫೆಬ್ರುವರಿ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬೊಮ್ಮಸಂದ್ರದ ಪ್ರಕಾಶ್‌ ಹಾಗೂ ಮಧು ಬಂಧಿತ ದಂಪತಿ.

‘ಬಂಧಿತರಿಂದ ₹2 ಲಕ್ಷ ನಗದು, ವಿವಿಧ ಕಂಪನಿಯ ನಾಲ್ಕು ಮೊಬೈಲ್‌, ಒಂದು ಬೈಕ್‌, 6 ಬ್ಯಾಂಕ್‌ ಖಾತೆಗಳಿಗೆ ಸೇರಿದ 15 ಕ್ರೆಡಿಟ್‌/ಡೆಬಿಟ್‌ ಕಾರ್ಡ್‌ಗಳು ಹಾಗೂ ಚೆಕ್‌ ಬುಕ್‌ಗಳು, 11 ವಿವಿಧ ಕಂಪನಿಯ ಕೈಗಡಿಯಾರ, ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ₹6 ಲಕ್ಷ ಪಡೆದುಕೊಂಡಿದ್ದರು. ಕೆಲಸ ಕೊಡಿಸದೆ, ಹಣವನ್ನೂ ವಾಪಸ್‌ ನೀಡದೆ ಮೋಸ ಎಸಗಿದ್ದಾರೆ ಎಂದು ದೂರು ನೀಡಲಾಗಿತ್ತು. ದೂರು ಆಧರಿಸಿ ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ರಾಜಕಾರಣಿಗಳು, ವಿವಿಧ ಇಲಾಖೆಯ ಅಧಿಕಾರಿಗಳ ಪರಿಚಯವಿದೆ. ಅವರ ಕಡೆಯಿಂದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಹಣ ಪಡೆದುಕೊಂಡಿದ್ದರು. ವಿದ್ಯಾರಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೇ ಮೂರು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ನಗರದ ಹಲವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಯುವಕರಿಗೆ ವಂಚಿಸಿರುವುದು ವಿಚಾರಣೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT