ಶುಕ್ರವಾರ, ಸೆಪ್ಟೆಂಬರ್ 17, 2021
22 °C

351 ಅಭ್ಯರ್ಥಿಗಳಿಗೆ ಉದ್ಯೋಗ ಭಾಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 351 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಯಿತು. 

ಮೇಳದಲ್ಲಿ 42ಕ್ಕೂ ಹೆಚ್ಚು ಕಂಪನಿಗಳು ಅಭ್ಯರ್ಥಿಗಳ ಸಂದರ್ಶನ ನಡೆಸಿದವು.  ಒಟ್ಟು 2,050 ಅಭ್ಯರ್ಥಿಗಳು ನೋಂದಾಯಿಸಿಕೊಂಡು, 1510 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 582 ಅಭ್ಯರ್ಥಿಗಳನ್ನು ಪಟ್ಟಿ ಮಾಡಿದ ನಂತರ ಅಂತಿಮವಾಗಿ 351 ಅಭ್ಯರ್ಥಿಗಳು ವಿವಿಧ ಕಂಪನಿಗಳ ಕೆಲಸಕ್ಕೆ ಆಯ್ಕೆಯಾದರು. 

ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲ ಖಾತೆ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. 

‘ರಾಜ್ಯದಲ್ಲಿ ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕುಶಲ ಸಂಪನ್ಮೂಲ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಎಷ್ಟೇ ಉದ್ಯೋಗಾಕಾಂಕ್ಷಿಗಳು ಬಂದರೂ ಅಗತ್ಯ  ತರಬೇತಿ, ಭಾಷಾ ಕೌಶಲ ಕಲಿಸಿ ಕೆಲಸ ಕೊಡಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು