ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದರ್ಶನ್‌ ಪ್ರಕರಣ: ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ

Published 15 ಜೂನ್ 2024, 17:08 IST
Last Updated 15 ಜೂನ್ 2024, 17:08 IST
ಅಕ್ಷರ ಗಾತ್ರ

ಬೆಂಗಳೂರು: ನಟ ದರ್ಶನ್‌ ಪ್ರಕರಣದ ವರದಿ ಮಾಡಲು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆವರಣಕ್ಕೆ ತೆರಳಿದ್ದ ಪತ್ರಕರ್ತನ ಮೇಲೆ ನಾಲ್ವರು ಹಲ್ಲೆ ನಡೆಸಿದ್ದಾರೆ.

‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ವರದಿಗಾರ ರಕ್ಷಿತ್‌ಗೌಡ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರು ನೀಡಿದ ದೂರು ಆಧರಿಸಿ ಪೊಲೀಸರು ಎನ್‌ಸಿಆರ್‌ ದಾಖಲು ಮಾಡಿಕೊಂಡಿದ್ದಾರೆ.

‘ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 16 ಮಂದಿಯನ್ನು ಪೊಲೀಸರು ಬಂಧಿಸಿದ್ದು ಶನಿವಾರ ಸಂಜೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸುವ ಮಾಹಿತಿ ತಿಳಿದು ವರದಿಗೆ ತೆರಳಿದ್ದೆ. ನ್ಯಾಯಾಲಯದ ಆವರಣದಲ್ಲಿರುವ ನೀರಿನ ಫಿಲ್ಟರ್ ಬಳಿ ನಿಂತಿದ್ದೆ. ಆಗ ಸ್ಥಳಕ್ಕೆ ಬಂದ ನಾಲ್ವರು ಮೊಬೈಲ್‌ ಇಟ್ಟುಕೊಂಡು ಏಕೆ ನಿಂತಿದ್ದೀಯಾ? ನಿನಗೇನು ಕೆಲಸ ಎಂದು ಪ್ರಶ್ನಿಸಿದ್ದರು. ನಾನು ವರದಿಗಾರ ಎಂದು ಹೇಳಿದೆ. ಆಗ ನನ್ನ ಮೇಲೆ ಹಲ್ಲೆ ನಡೆಸಿದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT