ಭಾನುವಾರ, ಮೇ 29, 2022
30 °C

ಬೆಂಗಳೂರು | ಟಿಪ್ಪರ್ ಲಾರಿ– ಬೈಕ್ ಅಪಘಾತ: ಪತ್ರಕರ್ತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಪುರಭವನ ಬಳಿ ಭಾನುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಪತ್ರಕರ್ತ ಎಸ್.ಎಸ್. ಗಂಗಾಧರಮೂರ್ತಿ (49) ಮೃತಪಟ್ಟಿದ್ದಾರೆ.

ಶೃಂಗೇರಿಯ ಗಂಗಾಧರ ಮೂರ್ತಿ, ‘ವಿಜಯವಾಣಿ’ ದಿನ ಪತ್ರಿಕೆಯಲ್ಲಿ ಮುಖ್ಯ ಉಪ ಸಂಪಾದಕರಾಗಿದ್ದರು. ‘ಚಾಮರಾಜ ಪೇಟೆಯಲ್ಲಿರುವ ಪತ್ರಿಕಾ ಕಚೇರಿಗೆ ಕೆಲಸಕ್ಕೆಂದು ಬೈಕ್‌ನಲ್ಲಿ ಹೊರಟಿ ದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಹಲಸೂರು ಗೇಟ್ ಸಂಚಾರ ಪೊಲೀಸರು ತಿಳಿಸಿದರು.

‘ಗಂಗಾಧರಮೂರ್ತಿ ಅವರು ಬೈಕ್‌ನಲ್ಲಿ ಪುರಭವನ ಎದುರಿನ ರಸ್ತೆಯಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲೇ ವೇಗವಾಗಿ ಬಂದ ಟಿಪ್ಪರ್ ಲಾರಿ, ರಸ್ತೆ ವಿಭಜಕಕ್ಕೆ ಗುದ್ದಿ ಬೈಕ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿತ್ತು. ಲಾರಿಯಡಿ ಸಿಲುಕಿದ್ದ ಅವರ ತಲೆ ಹಾಗೂ ದೇಹದ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು.’

‘ತೀವ್ರ ಗಾಯಗೊಂಡಿದ್ದ ಗಂಗಾಧರ ಮೂರ್ತಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆ ದೊಯ್ಯಲಾ ಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ತೀರಿಕೊಂಡಿದ್ದಾರೆ‘ ಎಂದೂ ತಿಳಿಸಿದರು.

‘ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.

ಗಂಗಾಧರಮೂರ್ತಿ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು