ಭಾನುವಾರ, ಜುಲೈ 3, 2022
26 °C

ಪತ್ರಕರ್ತೆ ಸಾವು: ಪತಿ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಯಿಟರ್ಸ್’ ಸುದ್ದಿ ಸಂಸ್ಥೆಯ ಉದ್ಯೋಗಿಯಾಗಿದ್ದ ಪತ್ರಕರ್ತೆ ಶ್ರುತಿ (35) ಸಾವಿನ ಸಂಬಂಧ, ಪತಿ ಅನಿಶ್ ಕೊಯಾಡನ್ ವಿರುದ್ಧ ವೈಟ್‌ಫೀಲ್ಡ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮಚ್ಚಯವೊಂದರಲ್ಲಿ ಶ್ರುತಿ ಹಾಗೂ ಅನಿಶ್ ದಂಪತಿ ನೆಲೆಸಿದ್ದರು. ಫ್ಲ್ಯಾಟ್‌ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ರುತಿ ಮೃತದೇಹ ಪತ್ತೆ ಆಗಿತ್ತು.

‘ಶ್ರುತಿ ಅವರಿಗೆ ಪತಿ ಅನಿಶ್ ಕಿರುಕುಳ ನೀಡುತ್ತಿದ್ದರು. ಅವರೇ ಶ್ರುತಿ ಸಾವಿಗೆ ಕಾರಣ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂಬುದಾಗಿ ಸಹೋದರ ನಿಶಾಂತ್ ದೂರು ನೀಡಿದ್ದಾರೆ. ಹೀಗಾಗಿ, ಅನಿಶ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸಾಫ್ಟ್‌ವೇರ್‌ ಎಂಜಿನಿಯರ್ ಆಗಿರುವ ಅನಿಶ್, ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು