ಮಂಗಳವಾರ, ಫೆಬ್ರವರಿ 25, 2020
19 °C

ಪತ್ರಕರ್ತರ ಸಹಕಾರ ಸಂಘ 70ನೇ ವರ್ಷಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರ ಸಹಕಾರ ಸಂಘಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ’ ಎಂದು ಉಪಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಸಂಘದ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂಘ ತನ್ನ ಮೂಲ ಉದ್ದೇಶಕ್ಕೆ ಬದ್ಧವಾಗಿ ಇಷ್ಟು ವರ್ಷ ಉಳಿದಿರುವುದು ಸಂತೋಷದ ವಿಚಾರ. ಪತ್ರಕರ್ತರ ಸ್ವಾಭಿಮಾನದ ಬದುಕಿಗೆ ನರವಾಗುತ್ತಿದೆ. ಸಂಘಕ್ಕ ಶಕ್ತಿ ತುಂಬುವ ಕೆಲಸಕ್ಕೆ ನಾವು ಕೈ ಜೋಡಿಸುತ್ತೇವೆ’ ಎಂದರು.

‘ಮುಂದಿನ ದಿನದಲ್ಲಿ ಸೈಬರ್‌ ಕಾನೂನಿನಲ್ಲಿ ಸಾಕಷ್ಟು ಸುಧಾರಣೆ ಆಗಲಿದ್ದು, ಆನ್‌ಲೈನ್‌ ಮಾಧ್ಯಮಕ್ಕೆ ಹೆಚ್ಚು ಆದ್ಯತೆ ದೊರೆಯಲಿದೆ’ ಎಂದರು. ‘ಮಾಧ್ಯಮ ಟ್ವೆಂಟಿ– 20’ ಸ್ಮರಣ ಸಂಚಿಕೆಯನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿ ಬಿಡುಗಡೆ ಮಾಡಿದರು. ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)