ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

44 ದ್ವಿಚಕ್ರ ವಾಹನ ಕಳವು: ಇಬ್ಬರು ಬಾಲಕರು ವಶಕ್ಕೆ

Published 23 ಜೂನ್ 2023, 14:27 IST
Last Updated 23 ಜೂನ್ 2023, 14:27 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರು ಬಾಲಕರನ್ನು ಜೆ.ಪಿ. ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಸ್ಥಳೀಯ ನಿವಾಸಿಗಳಾದ ಬಾಲಕರು, ವಾಹನ ಕಳ್ಳತನ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಕಾರ್ಯಾಚರಣೆ ನಡೆಸಿ ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಬಳಿಕ, ಮಕ್ಕಳ ಕಲ್ಯಾಣ ಅಧಿಕಾರಿಗಳ ಎದುರು ಕರೆದೊಯ್ದು ಅವರ  ಹೇಳಿಕೆ ದಾಖಲಿಸಲಾಗಿದೆ. ಸದ್ಯ ಬಾಲಮಂದಿರದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಹಲವು ವರ್ಷಗಳಿಂದ ಬಾಲಕರು ಕಳ್ಳತನ ಮಾಡುತ್ತಿದ್ದರು. ಇವರಿಬ್ಬರಿಂದ ₹ 35 ಲಕ್ಷ ಮೌಲ್ಯದ 44 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಬಹುತೇಕ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದರು. ಅದರಿಂದ ಬಂದ ಹಣವನ್ನು ಇಬ್ಬರೂ ಹಂಚಿಕೊಳ್ಳುತ್ತಿದ್ದರು’ ಎಂದು ತಿಳಿಸಿದರು.

‘ಜಯನಗರ, ಅವಲಹಳ್ಳಿ, ತಿಲಕ್‌ನಗರ, ಬನಶಂಕರಿ, ಮೈಕೊ ಲೇಔಟ್, ಬೆಳ್ಳಂದೂರು, ಎಚ್‌ಎಚ್‌ಆರ್‌ ಲೇಔಟ್, ಎಚ್‌ಎಎಲ್, ಕೆ.ಆರ್.ಪುರ, ಕಾಡುಗೋಡಿ ಹಾಗೂ ಆಂಧ್ರಪ್ರದೇಶದ ಮದನಪಲ್ಲಿ ಠಾಣೆ ವ್ಯಾಪ್ತಿಯಲ್ಲೂ ಬಾಲಕರು ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT