ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ: ಆರೋಪಿ ಜಾಮೀನು ತಿರಸ್ಕೃತ

Last Updated 21 ಮೇ 2022, 19:52 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ರೆಹಮತ್‌–ಉಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 67ನೇ ಸಿಸಿಎಚ್ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.

ಹಿಜಾಬ್ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ನ್ಯಾಯಮೂರ್ತಿಗಳು ತೀರ್ಪು ನೀಡಿದ್ದರು. ಅದನ್ನು ವಿರೋಧಿಸಿದ್ದ ತಮಿಳುನಾಡಿನ ತೌಹೀದ್ ಜಮಾತ್ (ಟಿ.ಎನ್‌.ಟಿ.ಜೆ) ಮುಸ್ಲಿಂ ಸಂಘಟನೆ ಮುಖಂಡ ಆರ್. ರಹಮತ್‌–ಉಲ್ಲಾ, ಮಾರ್ಚ್ 17ರಂದು ಮಧುರೈನಲ್ಲಿ ನಡೆದ ಸಮಾವೇಶದಲ್ಲಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿದ್ದ. ವಿಡಿಯೊ ಆಧರಿಸಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರೆಹಮತ್‌– ಉಲ್ಲಾನನ್ನು ತಮಿಳುನಾಡಿನಲ್ಲಿ ಬಂಧಿಸಿ ಕರೆತಂದಿದ್ದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಜಾಮೀನು ಕೋರಿ ಆರೋಪಿ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದ.

ಜಾರ್ಖಂಡ್ ಮಾದರಿಯಲ್ಲಿ ಕೊಲೆ ಬೆದರಿಕೆ: ಜಾಮೀನಿಗೆ ಆಕ್ಷೇಪಣೆ ಸಲ್ಲಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ಪಾಟೀಲ, ‘ಜಾರ್ಖಂಡ್‌ನಲ್ಲಿ ನ್ಯಾಯಾಧೀಶ ರೊಬ್ಬರನ್ನು ಕೊಲೆ ಮಾಡಿದ ರೀತಿಯಲ್ಲೇ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕಾನೂನು ಬಾಹಿರ ಚಟುವಟಿಕೆಗಳ ತಡೆ (ಯುಎಪಿ) ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಹೀಗಾಗಿ, ಜಾಮೀನು ನೀಡಬಾರದು’ ಎಂದು ಹೇಳಿದ್ದರು. ‘ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದು ಹೇಗೆ ? ಅವರಿಗೆ ಇರುವ ಭದ್ರತೆಗಳೇನು? ಎಂಬುದನ್ನು ತಿಳಿದುಕೊಳ್ಳಲು ಆರೋಪಿ, ಯೂಟ್ಯೂಬ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳಲ್ಲಿ ಹುಡುಕಾಡಿದ್ದ’ ಎಂದೂ ಪಾಟೀಲ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT