ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಂಕ್ಷನ್‌ಗಳಲ್ಲಿ ಕ್ಯಾಮೆರಾ: ಒಂದೇ ದಿನ 10 ಸಾವಿರ ಪ್ರಕರಣ

Last Updated 8 ಡಿಸೆಂಬರ್ 2022, 16:42 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಸಂಪರ್ಕರಹಿತವಾಗಿ ದಂಡ ವಿಧಿಸಲು ನಗರದ 50 ಜಂಕ್ಷನ್‌ಗಳಲ್ಲಿ ಕೃತಕ ಬುದ್ಧಿಮತ್ತೆ ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದ್ದು, ಗುರುವಾರ ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

‘ಸಂಚಾರ ನಿಯಮ ಉಲ್ಲಂಘನೆಯನ್ನು ಫೋಟೊ ಸಮೇತ ಪತ್ತೆ ಹಚ್ಚಿ ದಂಡ ವಿಧಿಸಲು ಅನುಕೂಲವಾಗಲೆಂದು 50 ಜಂಕ್ಷನ್‌ಗಳಲ್ಲಿ 250 ಕೃತಕ ಬುದ್ಧಿಮತ್ತೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗುರುವಾರ ಬೆಳಿಗ್ಗೆಯಿಂದಲೇ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಿದೆ’ ಎಂದು ವಿಶೇಷ ಕಮಿಷನರ್ (ಸಂಚಾರ) ಎಂ.ಎ. ಸಲೀಂ ತಿಳಿಸಿದರು.

‘ದಿನದ 24 ಗಂಟೆ ಹಾಗೂ ವರ್ಷದ 365 ದಿನಗಳೂ ಕ್ಯಾಮೆರಾಗಳು ಕಾರ್ಯನಿರ್ವಹಿಸಲಿವೆ. ಅತೀ ವೇಗದ ಚಾಲನೆ, ಸಿಗ್ನಲ್ ಜಂಪ್, ಜಿಬ್ರಾ ಕ್ರಾಸಿಂಗ್, ಹೆಲ್ಮೆಟ್ ರಹಿತ ಚಾಲನೆ, ತ್ರಿಬಲ್ ರೈಡಿಂಗ್ ಹಾಗೂ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುವವರ ಫೋಟೊಗಳು ಕ್ಯಾಮೆರಾದಲ್ಲಿ ಸೆರೆ ಆಗಲಿವೆ. ನಂತರ, ಐಟಿಎಂಎಸ್ ಮೂಲಕ ಸಂಬಂಧಪಟ್ಟ ವಾಹನಗಳ ಹೆಸರಿನಲ್ಲಿ ದಂಡದ ನೋಟಿಸ್ ಸಿದ್ಧವಾಗಲಿದೆ. ಬಳಿಕ, ವಾಹನಗಳ ಮಾಲೀಕರ ಮೊಬೈಲ್‌ಗೆ ದಂಡದ ನೋಟಿಸ್ ಸಂದೇಶ ಹೋಗಲಿದೆ’ ಎಂದು ಹೇಳಿದರು.

‘ಸಂಚಾರ ಸಿಬ್ಬಂದಿ ಕ್ಯಾಮೆರಾಗಳ ಮೂಲಕ ಉಲ್ಲಂಘನೆ ಫೋಟೊ ತೆಗೆಯುವ ವ್ಯವಸ್ಥೆ ಇದೆ. ಬಹುತೇಕ ಸಿಬ್ಬಂದಿ, ಫೋಟೊ ಕ್ಲಿಕ್ಕಿಸುವುದರಲ್ಲೇ ಸಮಯ ಹೋಗುತ್ತಿದೆ. ಇದೇ ಕಾರಣಕ್ಕೆ ಕೃತಕ ಬುದ್ಧಿಮತ್ತೆ ಕ್ಯಾಮೆರಾಗಳನ್ನು ದಂಡ ವಿಧಿಸುವ ಪ್ರಕ್ರಿಯೆಗೆ ಬಳಸಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಿಬ್ಬಂದಿಗಳನ್ನು ಸಂಚಾರ ನಿಯಂತ್ರಣಕ್ಕೆ ಬಳಸಲು ಅನುಕೂಲವಾಗಲಿದೆ’ ಎಂದು ಸಲೀಂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT