ಮಂಗಳವಾರ, ಫೆಬ್ರವರಿ 25, 2020
19 °C

ನ್ಯಾಯಮೂರ್ತಿ ಧರ್ಮಾಧಿಕಾರಿ ದಿಢೀರ್‌ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಬಾಂಬೈ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರಲ್ಲೊಬ್ಬರಾದ ನ್ಯಾಯಮೂರ್ತಿ ಸತ್ಯರಂಜನ್‌ ಧರ್ಮಾಧಿಕಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.

ವಕೀಲ ವೃತ್ತಿಯಲ್ಲಿ ತಮ್ಮದೇ ಛಾಪು ಮೂಡಿಸಿರುವ ಪ್ರತಿಷ್ಥಿತ ಧರ್ಮಾಧಿಕಾರಿ ಕುಟುಂಬದವರಾದ ಸತ್ಯರಂಜನ್‌, ಗುರುವಾರ ಸಂಜೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ, ಇವರ ರಾಜೀನಾಮೆ ಅಂಗೀಕಾರಗೊಂಡಿದೆಯೇ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ.

‘ಕೌಟುಂಬಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದೇನೆ. ನನಗೆ ಮುಂಬೈ ಬಿಟ್ಟು ಹೋಗಲು ಮನಸ್ಸಿಲ್ಲ. ಇನ್ನೊಂದೆಡೆ ಮುಖ್ಯನ್ಯಾಯಮೂರ್ತಿ ಹುದ್ದೆಗೆ ನನಗೆ ಬಡ್ತಿಯನ್ನೂ ನೀಡುತ್ತಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)