ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Last Updated 1 ಜೂನ್ 2022, 19:37 IST
ಅಕ್ಷರ ಗಾತ್ರ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ರಚಿಸಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗ ಸಾರ್ವಜನಿಕರಿಂದ ಅಹವಾಲು ಮತ್ತು ಸಲಹೆಗಳನ್ನು ಸ್ವೀಕರಿಸುತ್ತಿದೆ.

ಮೂರು ತಿಂಗಳಲ್ಲಿ
ವರದಿ ಸಲ್ಲಿಸಲು ಸರ್ಕಾರ ಆಯೋಗಕ್ಕೆ ತಿಳಿಸಿದ್ದು, ಆದ್ದರಿಂದ ಜೂನ್ 8 ರೊಳಗೆ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಬಹುದು ಎಂದು ಆಯೋಗ ತಿಳಿಸಿದೆ.

ವಿಕಾಸಸೌಧದ ಮೊದಲನೇ ಮಹಡಿಯಲ್ಲಿನ 133 ಮತ್ತು 134 ಕೊಠಡಿಯಲ್ಲಿನ ಆಯೋಗದ ಕಚೇರಿಗೆ ಲಿಖಿತ ರೂಪದಲ್ಲಿ ಸಲಹೆಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗೆ ಆಯೋಗದ ಕಾರ್ಯದರ್ಶಿ ಅವರನ್ನು ದೂರವಾಣಿ ಸಂಖ್ಯೆ 080–2235 2152, 2203 4004 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT