ಶನಿವಾರ, ಜೂನ್ 6, 2020
27 °C

ಆಧಾರ್ ಸಂಖ್ಯೆ‌ ತೋರಿಸಿದರೆ 5 ಕೆ.ಜಿ ಉಚಿತ ಅಕ್ಕಿ: ಗೋಪಾಲಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಯಾರ ಬಳಿ ಪಡಿತರ ಚೀಟಿ ಇಲ್ಲವೋ ಅವರು ಇದೇ 26ರಿಂದ 31ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಆಧಾರ್‌ ಕಾರ್ಡ್ ತೋರಿಸಿ ಉಚಿತವಾಗಿ 5 ಕೆ.ಜಿ.ಅಕ್ಕಿ ಪಡೆಯಬಹುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಶುಕ್ರವಾರ ನಗರದ ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ 4 ಸಾವಿರ ಮಂದಿ ಆಟೊ, ಲಾರಿ, ಟೆಂಪೊ ಮತ್ತು ಬಸ್ ಚಾಲಕರಿಗೆ ಉಚಿತ ಆಹಾರ ಕಿಟ್ ವಿತರಿಸಿದ ಅವರು ಮಾತನಾಡಿದರು.

‘ಜೂನ್ 1 ರಿಂದ 10ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಲಾಗುವುದು’ ಎಂದರು.

‘ಆಟೊ ಚಾಲಕರಿಗೆ ನೀಡಲಾಗುವ ₹ 5 ಸಾವಿರ ದುಡ್ಡು ಪಡೆಯಲು ಮಧ್ಯವರ್ತಿಗಳ ಮೊರೆ ಹೋಗಬೇಕಿಲ್ಲ. ನನ್ನ ಕಚೇರಿಯಿಂದಲೂ ದಾಖಲೆ ಒದಗಿಸುವ ಕೆಲಸ ನಡೆಯಲಿದೆ. ಅದನ್ನು ಬಳಸಿಕೊಳ್ಳಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು