ಶನಿವಾರ, ಮೇ 15, 2021
29 °C

ಕೆ.ಆರ್.ಮಾರುಕಟ್ಟೆ ಅಂಗಡಿಗೆ ಬೆಂಕಿ: ಮಾಲೀಕ ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕೆ.ಆರ್.ಮಾರುಕಟ್ಟೆ ಬಳಿಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಮಾಲೀಕ ಸಜೀವವಾಗಿ ದಹನವಾಗಿರುವುದಾಗಿ ಹೇಳಲಾಗುತ್ತಿದೆ‌

ಶುಕ್ರವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸುತ್ತಿದ್ದಾರೆ. 

'ಅಂಗಡಿಯೊಳಗೆ ಮಾಲೀಕ ಇದ್ದನೆಂದು ಸ್ಥಳೀಯರು ಹೇಳುತ್ತಿದ್ದಾರೆ‌. ಮಾಲೀಕನೂ ಬೆಂಕಿಯಲ್ಲಿ ಸುಟ್ಟು ಹೋಗಿರುವ ಸಾಧ್ಯತೆ ಇದೆ. ಬೆಂಕಿ ಕೆನ್ನಾಲಗೆ ಹೆಚ್ಚಿದ್ದು ನಂದಿಸುವ ಕೆಲಸ ನಡೆದಿದೆ' ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು