ಮಂಗಳವಾರ, ಜೂನ್ 22, 2021
28 °C
ಉಪಚುನಾವಣೆ ಫಲಿತಾಂಶ

ಕೆ.ಆರ್‌.ಪುರ: ಹ್ಯಾಟ್ರಿಕ್ ಜಯ ಸಾಧಿಸಿ ‘ಅರ್ಹ’ ಎನಿಸಿಕೊಂಡ ಭೈರತಿ ಬಸವರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯ ಪೂರ್ವದ ಹೆಬ್ಬಾಗಿಲಿನಂತಿರುವ ಕೆ.ಆರ್‌.ಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ಎ.ಬಸವರಾಜು (ಬೈರತಿ ಬಸವರಾಜು) ಹ್ಯಾಟ್ರಿಕ್ ಜಯದ ಸಾಧನೆ ಮಾಡಿದರು.

ಈ ಚುನಾವಣೆಯು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಯಿತು. ಬಸವರಾಜು ತಮ್ಮ ಸಮೀಪದ ಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ 62,646 ಮತಗಳ ಅಂತರದಿಂದ ಜಯ ಗಳಿಸಿದರು.

ಇದನ್ನೂ ಓದಿ: ಕೆ.ಆರ್‌.ಪುರ ಅಖಾಡದಲ್ಲೊಂದು ಸುತ್ತು| ವ್ಯಕ್ತಿ ನಿಷ್ಠೆ–ಪಕ್ಷ ನಿಷ್ಠೆಯ ಪೈಪೋಟಿ

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಸವರಾಜು 1,35,404 ಮತ ಪಡೆದುಕೊಂಡಿದ್ದರು. ಆ ಮೂಲಕ ಆಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಎನ್‌.ಎಸ್‌.ನಂದೀಶ್ ರೆಡ್ಡಿ ವಿರುದ್ಧ 32,729 ಮತಗಳ ಅಂತರದಿಂದ ಜಯಗಳಿಸಿದ್ದರು.

ಬಿಜೆಪಿಯಿಂದ ಬಸವರಾಜು ಅವರಿಗೆ ಟಿಕೆಟ್‌ ನೀಡಿದಾಗ ನಂದೀಶ್‌ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗದಂತೆ, ನಂದೀಶ್‌ ರೆಡ್ಡಿ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆ ಮೂಲಕ ಇಬ್ಬರೂ ಒಂದಾಗಿ ಚುನಾವಣೆಗೆ ಹೋಗುವಂತೆ ಬಿಜೆಪಿ ನೋಡಿಕೊಂಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು