ಬೆಂಗಳೂರು: ಫೆಡರೇಶನ್ ಆಫ್ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾದ (ಎಫ್‌ಎಚ್‌ಆರ್‌ಎಐ) ಅಧ್ಯಕ್ಷರಾಗಿ ಇಲ್ಲಿನ ಕೆ. ಶ್ಯಾಮ ರಾಜು ಆಯ್ಕೆಯಾಗಿದ್ದಾರೆ.
ನವದೆಹಲಿಯಲ್ಲಿ ನಡೆದ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಸಂಘದ 50 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಕರ್ನಾಟಕದವರೊಬ್ಬರು ಅಧ್ಯಕ್ಷರಾಗಿದ್ದಾರೆ. ಮುಂದಿನ ಒಂದು ವರ್ಷದ ಅವಧಿಗೆ ನೂತನ ಕಾರ್ಯಕಾರಿ ಸಮಿತಿ ರಚನೆಯಾಗಿದೆ.
ಬೆಂಗಳೂರಿನ ಮೌರ್ಯ ಹೋಟೆಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶ್ಯಾಮ ರಾಜು, ದಕ್ಷಿಣ ಭಾರತ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿದ್ದಾರೆ.