ಶನಿವಾರ, ಜುಲೈ 31, 2021
25 °C

‘ಖಾಲಿ ಹುದ್ದೆ ಭರ್ತಿಗೆ ಡಿ.ಸಿ ಗಳಿಗೆ ಸೂಚನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಖಾಲಿ ಇರುವ 1,419 ನರ್ಸ್‌ಗಳು, 506 ಪ್ರಯೋಗಾಲಯ ಸಹಾಯಕರು, 916 ಫಾರ್ಮಸಿಸ್ಟ್‌ಗಳು ಮತ್ತು ‘ಡಿ’ ಗ್ರೂಪ್‌ ಹುದ್ದೆಗಳನ್ನು ಆರು ತಿಂಗಳ ಅವಧಿಗೆ ಅಥವಾ ಮುಂದಿನ ನೇಮಕಾತಿವರೆಗೆ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕೆಲವು ಖಾಸಗಿ ಆಸ್ಪತ್ರೆಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲು ಮಾಡುತ್ತಿವೆ. ಅಂಥ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದೂ ಎಚ್ಚರಿಕೆ ನೀಡಿದರು.

‘25 ಖಾಸಗಿ ವೈದ್ಯಕೀಯ ಕಾಲೇಜುಗಳು 10 ದಿನಗಳ ಒಳಗೆ ಕೋವಿಡ್‌ ತಪಾಸಣಾ ಪ್ರಯೋಗಾಲಯಗಳನ್ನು ಆರಂಭಿಸುವುದಾಗಿ ಭರವಸೆ ನೀಡಿವೆ. ಕೋಲಾರದ ಎಸ್‌ಡಿಯುಎಂಸಿ ಮತ್ತು ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್‌ ನೀಡಲಾಗಿದೆ. ಪ್ರತಿ ಪ್ರಯೋಗಾಲಯಗಳಲ್ಲಿ ಕನಿಷ್ಠ ತಲಾ 500 ಕೋವಿಡ್‌ ಪರೀಕ್ಷೆಗಳನ್ನು ನಡೆಸಬೇಕು’ ಎಂದು ಸಚಿವರು ಸೂಚಿಸಿದರು. ‘ಸಪ್ತಗಿರಿ, ಬಿಜಿಎಸ್‌ ಮತ್ತು ಡಾ. ಅಂಬೇಡ್ಕರ್‌ ವೈದ್ಯಕೀಯ ಕಾಲೇಜುಗಳು 2–3 ದಿನಗಳಲ್ಲಿ ತಮ್ಮ ಪಾಲಿನ ಹಾಸಿಗೆಗಳನ್ನು ರೋಗಿಗಳಿಗೆ ಮೀಸಲಿಡಲು ಒಪ್ಪಿವೆ‘ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು