ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶನಿವಾರ ಭೇಟಿಮಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಮತ್ತು ಅದರ ಶಾಖೆಗಳನ್ನು ತೆರೆಯಲು ನೆರವು ನೀಡುವಂತೆ ಮನವಿ ಮಾಡಿದರು.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ‘ರಸ್ತೆ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಕಡಿಮೆಮಾಡಲು ನಾಲ್ಕು ಅತ್ಯಾಧುನಿಕ ತುರ್ತು ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೂ ನೆರವು ನೀಡುವಂತೆ ಮನವಿ ಮಾಡಿದ್ದೇನೆ. ಕ್ಯಾನ್ಸರ್, ಮೂತ್ರಪಿಂಡ ರೋಗಗಳು, ಹೃದ್ರೋಗ ಮತ್ತಿತರ ತೀವ್ರ ಸ್ವರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡುವುದಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳುಳ್ಳ ಹೆಲ್ತ್ ಸಿಟಿ ನಿರ್ಮಾಣಕ್ಕೂ ನೆರವು ಕೋರಿದ್ದೇನೆ' ಎಂದು ತಿಳಿಸಿದ್ದಾರೆ.

ಬಯಲುಸೀಮೆಯ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೀರಾವರಿ ಸೌಲಭ್ಯದ ವಿಸ್ತರಣೆ, ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಗಳ ವಿಭಜನೆ ಕುರಿತೂ ಚರ್ಚಿಸಲಾಗಿದೆ ಎಂದು ಸಚಿವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.