ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕೆ.ಎ.ದಯಾನಂದ

Last Updated 17 ಡಿಸೆಂಬರ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಅಮಾನತುಗೊಂಡ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕೆ.ಎ.ದಯಾನಂದ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡಿತ್ತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್‌ ಹಾಗೂ ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಎಸ್‌. ರಂಗಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು. ಅದರಂತೆ ಸರ್ಕಾರ ಈ ಇಬ್ಬರನ್ನು ಅಮಾನತು ಮಾಡಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಸಂಗಪ್ಪ ಅವರು ಹೆಚ್ಚುವರಿಯಾಗಿ ಜಿಲ್ಲಾಧಿಕಾರಿ ಹುದ್ದೆ ನಿರ್ವಹಿಸುತ್ತಿದ್ದರು. ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಈ ಸ್ಥಾನಕ್ಕೆ ಸರ್ಕಾರ ವರ್ಗಾವಣೆ ಮಾಡಿದೆ. 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಗರ ಜಿಲ್ಲಾಧಿಕಾರಿಯಾಗಿ ದಯಾನಂದ ಅವರು ಕಾರ್ಯನಿರ್ವಹಿಸಿದ್ದರು. ಬಳಿಕ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT