ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಚಂದ್ರೇಗೌಡ, ಸುಮಿತ್ರಾಬಾಯಿಗೆ ‘ಕಸಾಪ ಗೌರವ ಪ್ರಶಸ್ತಿ’

Published 2 ಮೇ 2024, 15:43 IST
Last Updated 2 ಮೇ 2024, 15:43 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಗೌರವ ದತ್ತಿ ಪ್ರಶಸ್ತಿಗೆ’ ಜಾನಪದ ವಿದ್ವಾಂಸ ಮೈಸೂರಿನ ಹಿ.ಶಿ.ರಾಮಚಂದ್ರೇಗೌಡ ಮತ್ತು ವಿಮರ್ಶಕಿ ಬೆಂಗಳೂರಿನ ಬಿ.ಎನ್.ಸುಮಿತ್ರಾಬಾಯಿ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದಲ್ಲಿ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹30 ಸಾವಿರ ನಗದು ಒಳಗೊಂಡಿದೆ. 

ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್‌ ಅವರು ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಗೆ ಪ್ರತಿವರ್ಷ ಪರಿಷತ್ತಿನ ಮೂಲಕ ಪ್ರಶಸ್ತಿ ನೀಡಲಾಗುತ್ತಿದೆ. 

ಹಿ.ಶಿ.ರಾಮಚಂದ್ರೇಗೌಡ ಅವರು ಕೇರಳದಲ್ಲಿ ಜಾನಪದದ ಕುರಿತು ಅಧ್ಯಯನ ಮಾಡಿದ್ದರು. ಅವರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ನಿರ್ದೇಶಕರಾಗಿ ನಿವತ್ತರಾಗಿದ್ದಾರೆ. ಜಾನಪದ ಸಾಹಿತ್ಯಕ್ಕೆ ಇವರು ಮೌಲಿಕ ಕೊಡುಗೆಗಳನ್ನು ನೀಡಿದ್ದಾರೆ.

ಬಿ.ಎನ್. ಸುಮಿತ್ರಾಬಾಯಿ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹಾಸನದ ಎ.ವಿ.ಕಾಂತಮ್ಮ ಮತ್ತು ಬೆಂಗಳೂರಿನ ಎ.ಪಿ.ಎಸ್.ವಾಣಿಜ್ಯ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದಾರೆ. ಮಹಿಳಾ ಸಾಹಿತ್ಯದ ಅಧ್ಯಯನಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕಸಾಪ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಎನ್. ಸುಮಿತ್ರಾಬಾಯಿ
ಬಿ.ಎನ್. ಸುಮಿತ್ರಾಬಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT