ಭಾನುವಾರ, ಜೂನ್ 13, 2021
21 °C

ಪರಿಹಾರ ಮೊತ್ತ ಹೆಚ್ಚಿಸಿ: ಹೈಕೋರ್ಟ್‌ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕಾಚರಕನಹಳ್ಳಿ ಕೊಳೆಗೇರಿ ಪ್ರದೇಶದಲ್ಲಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ‘ಕಾನೂನು ಕೈಗೆ ತೆಗೆದುಕೊಂಡು ಗುಡಿಸಲುಗಳಿಗೆ ಬೆಂಕಿ ಹಚ್ಚಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ನೆಲೆ ಕಳೆದುಕೊಂಡವರಿಗೆ ಸರ್ಕಾರ ನೀಡಿದ ಪರಿಹಾರ ತೀರಾ ಕಡಿಮೆ’ ಎಂದು  ಅಭಿಪ್ರಾಯಪಟ್ಟಿತು.

‘ಪ್ರತಿ ಕುಟುಂಬಕ್ಕೆ ₹6,100 ಪರಿಹಾರ ನಿಗದಿ ಮಾಡಲಾಗಿದೆ. ಬಡ ಜನರ ಮನೆಗಳನ್ನು ನಾಶ ಮಾಡಿದ್ದಕ್ಕೆ ಇದು ಸೂಕ್ತ ಪರಿಹಾರವಲ್ಲ. ಪರಿಹಾರ ಮೊತ್ತ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಇನ್ನೆರಡು ವಾರದಲ್ಲಿ ಮರುಪರಿಶೀಲನೆ ನಡೆಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು