ಬೆಂಗಳೂರು: ಬಸವನಗುಡಿ ಪ್ರದೇಶದಲ್ಲಿ ಕಡಲೆಕಾಯಿ ಪರಿಷೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಹತ್ತಾರು ವ್ಯಾಪಾರಿಗಳು ಕಡಲೆಕಾಯಿ ರಾಶಿ ಹಾಕಿಕೊಂಡು ಗ್ರಾಹಕರನ್ನು ಎದುರು ನೋಡುತ್ತಿದ್ದಾರೆ. ಡಿ. 3ರಂದು ಪರಿಷೆಗೆ ಅಧಿಕೃತ ಚಾಲನೆ ದೊರೆಯಲಿದೆ.

ಈ ಬಾರಿ ಪರಿಷೆಯಲ್ಲಿ ಪ್ಲಾಸ್ಟಿಕ್ ಚೀಲ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಚೀಲ ಬಳಸದಂತೆ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಕರು ಲಯನ್ಸ್ ಕ್ಲಬ್ ಮತ್ತು ಬಿಬಿಎಂಪಿ ಅಧಿಕಾರಿಗಳು ಜನಜಾಗೃತಿ ಮೂಡಿಸಿದರು. ಅಲ್ಲಲ್ಲಿ ಸಂಗ್ರಹ ಮಾಡಿಕೊಂಡಿದ್ದ ಪ್ಲಾಸ್ಟಿಕ್ ಚೀಲಗಳನ್ನು ಬಿಬಿಎಂಪಿ ಅಧಿಕಾರಿಗಳು ವಶಪಡಿಸಿಕೊಂಡರು.

ಗ್ರಾಹಕರು ಪರಿಷೆಗೆ ಬರುವಾಗ ಬಟ್ಟೆಯ ಚೀಲಗಳನ್ನು ತಪ್ಪದೇ ತರಬೇಕು. ತಿಂಡಿ ಮತ್ತಿತರ ವಸ್ತುಗಳನ್ನು ಪ್ಲಾಸ್ಟಿಕ್ ಕವರ್ಗಳಲ್ಲಿ ತರಬಾರದು. ತಂದರೆ ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಪರಿಷೆಯ ಆವರಣದಲ್ಲಿ ಶನಿವಾರ ಫ್ಯಾನ್ಸಿ ವಸ್ತುಗಳ ಮಾರಾಟವೇ ಜೋರಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.