ಬೆಂಗಳೂರು: ಹೆಸರಘಟ್ಟ ಹೋಬಳಿಯ ಕಡತನಮಲೆ ಹಾಲು ಉತ್ಪಾದಕ ಸಹಕಾರ ಸಂಘದ ನಿರ್ದೇಶಕ ಸ್ಥಾನದಿಂದ ಕೆ.ಆರ್.ಸತೀಶ್ ಅವರನ್ನು ಅನರ್ಹಗೊಳಿಸಿ ಸಹಕಾರ ಸಂಘಗಳ ಸಹಾಯಕ ರಿಜಿಸ್ಟ್ರಾರ್ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಸಂಬಂಧ ಕೆ.ಆರ್.ಸತೀಶ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಪ್ರಕರಣವನ್ನು ಪುನಃ ಸಹಕಾರ ಸಂಘಗಳ ಸಹಾಯಕ ರಿಜಿಸ್ಟ್ರಾರ್ ಅವರಿಗೆ ವರ್ಗಾಯಿಸಿರುವ ನ್ಯಾಯಪೀಠ, ‘ಎಲ್ಲಾ ಪಕ್ಷಗಾರರಿಗೆ ತಮ್ಮ ಅಹವಾಲು ಸಲ್ಲಿಸಲು ಅವಕಾಶ ನೀಡಿ ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು. ವಿಳಂಬ ಮಾಡದೆ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿದೆ.

ಅರ್ಜಿ: ‘ಸಹಕಾರ ಸಂಘಗಳ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿ ನೆಲ್ಲುಕುಂಟೆ ಸತೀಶ್ಗೌಡ ಅವರು ಸಹಕಾರ ಸಂಘಗಳ ನಿಬಂಧಕರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಕಳೆದ ತಿಂಗಳ 24ರಂದು ಕೆ.ಆರ್.ಸತೀಶ್ ಅವರನ್ನು ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸತೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.