ಶನಿವಾರ, ಮಾರ್ಚ್ 6, 2021
32 °C

ಹೆಸರಘಟ್ಟ: ಕಾಕೋಳು ಗ್ರಾಮ ಸೀಲ್‍ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಐವತ್ತಾರು ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತ ಪಟ್ಟ ಹಿನ್ನೆಲೆಯಲ್ಲಿ ಕಾಕೋಳು ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಯಿತು. 

ಎರಡು ದಿನಗಳಿಂದ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು ತಿಳಿಸಿದರು.

ಗ್ರಾಮದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು ಹನ್ನೊಂದು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಸೀಲ್‍ಡೌನ್ ನಡುವೆ ಮದ್ಯ ಮಾರಾಟ: ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದ್ದರೂ, ಗ್ರಾಮದಲ್ಲಿ ಮದ್ಯ ಮಾರಾಟ ನಿರಾತಂಕವಾಗಿ ಸಾಗಿತ್ತು. ಈ ಕುರಿತು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.

ಪೊಲೀಸ್ ಸಿಬ್ಬಂದಿಗೆ ಸೋಂಕಿಲ್ಲ: ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಹೊಯ್ಸಳ ಚಾಲಕನಿಗೆ ಕೊರೊನಾ ಸೋಂಕು ದೃಡ ಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಸಿಬ್ಬಂದಿಗೆ ಸೋಂಕು ಹರಡಿಲ್ಲ ಎಂದು ಚಿಕ್ಕಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಜಯರಾಮ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು