ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ

ಕಾಮಗಾರಿ ಪರಿಶೀಲನೆ ನಡೆಸಿದ ನಿರ್ಮಲಾನಂದನಾಥ ಸ್ವಾಮೀಜಿ
Published 21 ಜುಲೈ 2023, 19:30 IST
Last Updated 21 ಜುಲೈ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕದ ನ್ಯೂಜೆರ್ಸಿಯ ಫ್ರ್ಯಾಂಕ್ಲಿನ್  ಟೌನ್‌ಶಿಪ್‌ನಲ್ಲಿ ಆದಿಚುಂಚನಗಿರಿ ಮಠದಿಂದ ಸುಮಾರು 1 ಕೋಟಿ ಡಾಲರ್ (₹ 80 ಕೋಟಿ) ವೆಚ್ಚದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣಗೊಳ್ಳುತ್ತಿದ್ದು ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾಮಗಾರಿ ಪರಿಶೀಲಿಸಿದರು.

ಶ್ರೀಗಳು ದೇಗುಲ ಕಾಮಗಾರಿ ಪರಿಶೀಲನೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಆದಿಚುಂಚನಗಿರಿ ಮಹಾಸಂಸ್ಥಾನವು ಈ ಟೌನ್‌ಶಿಪ್‌ನಲ್ಲಿ 20 ಎಕರೆ ಜಮೀನು ಖರೀದಿಸಿದೆ. ಅಲ್ಲಿ ನಿರ್ಮಾಣ ಆಗುತ್ತಿರುವ 5,000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಉದ್ದೇಶ ಹೊಂದಿದೆ. ಮೊದಲ ಹಂತದಲ್ಲಿ ದೇವಾಲಯ, ಅರ್ಚಕರ ನಿವಾಸ ನಿರ್ಮಾಣವಾಗಲಿದೆ.

ಡಾ.ಅಮರನಾಥಗೌಡ, ಡಾ.ಬಾಬು ಕಿಲಾರ ಅವರ ನೇತೃತ್ವದಲ್ಲಿ ಕಾಮಗಾರಿಗಳು ಆರಂಭವಾಗಿವೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT