ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಿಲು ತೆರೆದ ಕಲಾಸಿಪಾಳ್ಯ ಠಾಣೆ

Last Updated 9 ಜುಲೈ 2020, 12:35 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ 20 ದಿನಗಳವರೆಗೆ ಸೀಲ್‌ಡೌನ್‌ ಆಗಿದ್ದ ಕಲಾಸಿಪಾಳ್ಯ ಠಾಣೆ ಗುರುವಾರದಿಂದ ಪುನಃ ಆರಂಭವಾಗಿದೆ.

ಕೆ.ಆರ್‌. ಮಾರುಕಟ್ಟೆ ಹಾಗೂ ವಿಕ್ಟೋರಿಯಾ ಆಸ್ಪತ್ರೆ ಸಮೀಪದಲ್ಲೇ ಇರುವ ಕಲಾಸಿಪಾಳ್ಯ ಠಾಣೆಯ 20 ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿತ್ತು.

ಸೋಂಕಿತರ ಸಂಖ್ಯೆ ಕಡಿಮೆಯಾಗಿರುವುದರಿಂದ ಠಾಣೆ ಕೆಲಸಗಳು ಪುನಃ ಆರಂಭಿಸಲಾಗುತ್ತಿದೆ. ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ, ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೂತ್ ಅವರೇ ಗುರುವಾರ ಠಾಣೆಗೆ ಭೇಟಿ ನೀಡಿ ಬಾಗಿಲು ತೆಗೆಸಿದರು. ಸಿಬ್ಬಂದಿಗೂ ಧೈರ್ಯ ತುಂಬಿದರು.

ಭಾಸ್ಕರ್ ರಾವ್, ‘ಪ್ರತಿಯೊಬ್ಬರು ಮಾಸ್ಕ್, ಕೈಗವಸ, ಮುಖಗವಚ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಆಗಾಗ ಕೈ ತೊಳೆಯುತ್ತಿರಬೇಕು. ಠಾಣೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೊರೊನಾ ವಿರುದ್ಧ ನಾವೆಲ್ಲರೂ ಹೋರಾಡಬೇಕು’ ಎಂದು ಸಿಬ್ಬಂದಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT