ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷಕಾರಿ ತ್ಯಾಜ್ಯ ರಸ್ತೆಗೆ: ಎಫ್‌ಐಆರ್‌

Last Updated 10 ಮಾರ್ಚ್ 2019, 19:04 IST
ಅಕ್ಷರ ಗಾತ್ರ

ಬೆಂಗಳೂರು: ಕಲಾಸಿಪಾಳ್ಯ ಹೊಸ ಬಡಾವಣೆಯ 2ನೇ ಅಡ್ಡರಸ್ತೆಯಲ್ಲಿ ವಿಷಕಾರಿ ತ್ಯಾಜ್ಯ ಎಸೆಯಲಾಗಿದ್ದು, ಆ ಸಂಬಂಧ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಿಷಕಾರಿ ತ್ಯಾಜ್ಯ ಎಸೆದಿದ್ದಾರೆ ಎನ್ನಲಾದ ಅಲೆಪ್ಪ ಪಾರ್ಸೆಲ್ ಸರ್ವೀಸಸ್‌ನ ಮಾಲೀಕರ ವಿರುದ್ಧ ಬಿಬಿಎಂಪಿಯ ಕಿರಿಯ ಆರೋಗ್ಯ ಪರಿವೀಕ್ಷಕ ವೀರಯ್ಯ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಅಲೆಪ್ಪ ಪಾರ್ಸೆಲ್ ಸರ್ವೀಸಸ್‌ನವರು ವಿಷಕಾರಿ ತ್ಯಾಜ್ಯವಾದ ಅವಧಿ ಮೀರಿದ ಔಷಧಿಗಳನ್ನು ರಸ್ತೆಯಲ್ಲೇ ಎಸೆದು ಹೋಗಿದ್ದಾರೆ. ಈ ತ್ಯಾಜ್ಯ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ’ ಎಂದು ವೀರಯ್ಯ ದೂರಿನಲ್ಲಿ ತಿಳಿಸಿದ್ದಾರೆ.

‘ತ್ಯಾಜ್ಯ ಎಸೆದ ಬಗ್ಗೆ ನೋಟಿಸ್‌ ನೀಡಲು ಅಲೆಪ್ಪ ಪಾರ್ಸೆಲ್ ಸರ್ವೀಸಸ್‌ ಕಚೇರಿಗೆ ಹೋದಾಗ ಮಾಲೀಕರು ಉಡಾಫೆಯಿಂದ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT