ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾಸಿಪಾಳ್ಯದಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ

Last Updated 12 ಏಪ್ರಿಲ್ 2022, 19:38 IST
ಅಕ್ಷರ ಗಾತ್ರ

ಬೆಂಗಳೂರು: ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲಿ ಗಾಂಜಾ ಮಾರುತ್ತಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

‘ಭಾನುಪ್ರಕಾಶ್ ರೆಡ್ಡಿ ಹಾಗೂ ನಿತೇಶ್ ಬಂಧಿತರು. ಇವರಿಂದ 21 ಕೆ.ಜಿ 350 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹೊರ ಜಿಲ್ಲೆಗಳಿಂದ ಗಾಂಜಾ ತರಿಸಿಕೊಂಡಿದ್ದ ಆರೋಪಿಗಳು, ದ್ವಿಚಕ್ರ ವಾಹನದಲ್ಲಿ ಮಾರುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಕಾರ್ಮಿಕರು ಹಾಗೂ ಕೆಲ ಕಂಪನಿಗಳ ನೌಕರರು ಆರೋಪಿಗಳ ಬಳಿ ಗಾಂಜಾ ಖರೀದಿಸುತ್ತಿದ್ದರು.’

‘ಏಪ್ರಿಲ್ 11ರಂದು ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಗಳನ್ನು ಬಂಧಿಸಿ ಗಾಂಜಾ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದರು. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT