ಸೋಮವಾರ, ಆಗಸ್ಟ್ 15, 2022
27 °C

ಕಲಾಸಿಪಾಳ್ಯದಲ್ಲಿ ಗಾಂಜಾ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕಲಾಸಿಪಾಳ್ಯದಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿ ಸೆಲ್ವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಸೆಲ್ವರಾಜ್, ಹಲವು ತಿಂಗಳಿನಿಂದ ಗಾಂಜಾ ಮಾರುತ್ತಿದ್ದ. ಈತನನ್ನು ಬಂಧಿಸಿ, 20 ಕೆ.ಜಿ 575 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಪೊಟ್ಟಣಗಳಲ್ಲಿ ಗಾಂಜಾ ತುಂಬಿಕೊಂಡು ಸೋಮವಾರ (ಜೂನ್ 27) ಬೆಳಿಗ್ಗೆ ಕಲಾಸಿಪಾಳ್ಯ ಬಳಿ ಆರೋಪಿ ಬಂದಿದ್ದ. ಪರಿಚಯಸ್ಥ ಗ್ರಾಹಕರಿಗೆ ಗಾಂಜಾ ಮಾರುತ್ತಿದ್ದ. ಕೆಲ ಕಾರ್ಮಿಕರು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಗಾಂಜಾ ಖರೀದಿಸುತ್ತಿದ್ದರು.’

‘ಗಾಂಜಾ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಹೊರರಾಜ್ಯದಿಂದ ಗಾಂಜಾ ಖರೀದಿಸಿ ತಂದು ನಗರದಲ್ಲಿ ಮಾರುತ್ತಿದ್ದ ಬಗ್ಗೆ ಆರೋಪಿ ಹೇಳಿಕೆ ನೀಡಿದ್ದಾನೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು