ಮಂಗಳವಾರ, ಫೆಬ್ರವರಿ 7, 2023
27 °C

ಬೆಂಗಳೂರಿನಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಲಾಸಿ ಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ 6 ಕೆಜಿ 263 ಗ್ರಾಂ ಗಾಂಜಾ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ಲಿಯಾಕತ್‌ ಅಲಿ ಬಂಧಿತ ಆರೋಪಿ. ಈತ ನಗರದ ಮಾವಳ್ಳಿ ನಿವಾಸಿ ಎಂಬುದು ತನಿಖೆಯಿಂದ ಗೊತ್ತಾಗಿದೆ. ಈತನ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ.

‘ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಸಿಬ್ಬಂದಿ ಜನತಾ ಲಾಡ್ಜ್‌ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತ ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಈತನ ಕಾರ್ಯಕ್ಕೆ ಮತ್ತೊಬ್ಬ ವ್ಯಕ್ತಿ ಸಹಕರಿಸುತ್ತಿದ್ದ ಎಂಬುದೂ ವಿಚಾರಣೆಯಿಂದ ಗೊತ್ತಾಗಿದೆ. ಆತನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಕಳೆದ ಒಂದು ವರ್ಷದಿಂದ ಈ ಕಾರ್ಯದಲ್ಲಿ ತೊಡಗಿಕೊಂಡಿರುವುದಾಗಿ ಆತ ಹೇಳಿದ್ದಾನೆ. ಆರೋಪಿಯಿಂದ ಇನ್ನಷ್ಟು ಮಾಹಿತಿಗಳನ್ನು ಕಲೆಹಾಕಿ ಅದರ ಆಧಾರದಲ್ಲಿ ತನಿಖೆ ಮುಂದುವರಿಸಲಾಗುತ್ತದೆ’ ಎಂದೂ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು