ಬೆಂಗಳೂರು: ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಕೃಷ್ಣಮೂರ್ತಿ ಎಂಬಾತನನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಎಂಬಾತನನ್ನು ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಕಸ್ಟಡಿಗೆ ಪಡೆಯಲಾಗಿತ್ತು. ಆತನೇ ಕೃಷ್ಣಮೂರ್ತಿ ಹೆಸರು ಬಾಯ್ಬಿಟ್ಟಿದ್ದಾನೆ ಎಂದು ಗೊತ್ತಾಗಿದೆ.

‘ವಶಕ್ಕೆ ಪಡೆದಿರುವ ಕೃಷ್ಣಮೂರ್ತಿ, ಹುಬ್ಬಳ್ಳಿ ನಿವಾಸಿ. ಆತ ಆರೋಪಿಗಳ ತಂಡದ ಜೊತೆ ಒಡನಾಟವಿಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಹುಬ್ಬಳ್ಳಿಗೆ ಶುಕ್ರವಾರ ಬೆಳಿಗ್ಗೆ ಹೋಗಿರುವ ವಿಶೇಷ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.