ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲು–ಬಾಯಿ ಜ್ವರಕ್ಕೆ ಚಿಕಿತ್ಸೆ

Last Updated 16 ಅಕ್ಟೋಬರ್ 2019, 19:34 IST
ಅಕ್ಷರ ಗಾತ್ರ

ಬೆಂಗಳೂರು: ‘ಇತ್ತೀಚಿನ ದಿನಗಳಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಳ್ಳುವ ಕಾಲು–ಬಾಯಿ ಜ್ವರ ಹೈನುಗಾರಿಕೆ ಮಾಡುವವರಿಗೆ ಕಂಟಕವಾಗಿ ಪರಿಣಮಿಸಿದೆ. ಈ ಬಗ್ಗೆ ಜನರು ಜಾಗೃತರಾಗಿ ತಮ್ಮ ಹಸುಗಳಿಗೆ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ಕೊಡಿಸುವ ಅಗತ್ಯ ಇದೆ’ ಎಂದು ಬಿಬಿಎಂಪಿಯ ದೊಮ್ಮಲೂರು ವಾರ್ಡ್‌ ಸದಸ್ಯ ಲಕ್ಷ್ಮೀನಾರಾಯಣ ಸಲಹೆ ನೀಡಿದರು.

ದೊಮ್ಮಲೂರು ವಾರ್ಡ್‌ನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ‘ಕಾಲು–ಬಾಯಿ ಜ್ವರ’ ಜಾಗೃತಿ ಮತ್ತು ಉಚಿತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಬಿರದಲ್ಲಿ 116 ರಾಸುಗಳಿಗೆ ಕಾಲು–ಬಾಯಿ ರೋಗ ನಿರೋಧಕ ಲಸಿಕೆಯನ್ನು ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಸ್‌.ಎನ್‌.ಹರೀಶ್‌ ನೀಡಿದರು. ವಾರ್ಡ್‌ನ ರಘು, ಕೃಷ್ಣ, ಮುನಿರಾಜು ಇನ್ನಿತರರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT